Coastal Bulletin

ನವದೆಹಲಿ : ಈಶಾನ್ಯ ರಾಜ್ಯಗಳಲ್ಲಿ ಚುನಾವಣಾ ಫಲಿತಾಂಶದಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಪ್ರಚಂಡ ಜಯಭೇರಿ ಭಾರಿಸಿದ್ದು ಕಾಂಗ್ರೆಸ್ ಧೂಳೀಪಟವಾಗಿದೆ. ತ್ರಿಪುರಾ, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ.ಮೆಘಾಲಯದಲ್ಲಿ ಬಿಜೆಪಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಎರಡು ರಾಜ್ಯದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ಬಿಜೆಪಿ ಇದೀಗ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಜಿ20 ಶೃಂಗಸಭೆಯಲ್ಲಿ ಸಕ್ರಿಯರಾಗಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 7 ಗಂಟೆಗೆ ಬಿಜೆಪಿ ಪ್ರಧಾನ ಕಚೇರಿಕೆಗೆ ಭೇಟಿ ನೀಡಲಿದ್ದಾರೆ. ಇಷ್ಟೇ ಅಲ್ಲ ಪ್ರಧಾನ ಕಚೇರಿಯಿಂದ ಮೋದಿ ಭಾಷಣ ಮಾಡಲಿದ್ದಾರೆ. ನಾಗಾಲ್ಯಾಂಡ್, ತ್ರಿಪುರಾ ಹಾಗೂ ಮೆಘಾಲಯದ ಜನತೆಗೆ ಧನ್ಯವಾದ ಹೇಳಲಿದ್ದಾರೆ. ಇದರ ಜೊತೆಗೆ ಸಂಸದರನ್ನುದ್ದೇಶಿ ಭಾಷಣ ಮಾಡಲಿದ್ದಾರೆ.

ತ್ರಿಪುರಾದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 31. ಸದ್ಯ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದೆ. ಬಿಜೆಪಿ ಹಾಗೂ ಮೈತ್ರಿ ಪಕ್ಷಗಳು ಈಗಾಗಲೇ 33 ಸ್ಥಾನ ಗೆದ್ದುಕೊಂಡಿದೆ.

ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿದೆ. ಬಿಜೆಪಿ ಹಾಗೂ ಎನ್‌ಡಿಪಿಪಿ ಮೈತ್ರಿ ಪಕ್ಷ ಒಟ್ಟು 37 ಸ್ಥಾನಗಳನ್ನು ಈಗಾಗಲೇ ಗೆದ್ದುಕೊಂಡಿದೆ.ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿದೆ. ಈಶಾನ್ಯ ರಾಜ್ಯಗಳ ಪೈಕಿ ಇದೀಗ ಕೇಸರಿ ಪಕ್ಷ ದಶಕಗಳ ಕಾಲ ಕಾಂಗ್ರೆಸ್ ಹಾಗೂ ಎಡರಂಗದ ಸರ್ಕಾರವನ್ನು ಕಿತ್ತೊಗೆದಿದೆ. ಇಷ್ಟೇ ಅಲ್ಲ ಬಿಜೆಪಿ ಅಬ್ಬರಕ್ಕೆ ಕಾಂಗ್ರೆಸ್ ಹಾಗೂ ಎಡರಂಗ ಪಕ್ಷಗಳು ಧೂಳೀಪಟವಾಗಿದೆ. ನಾಗಾಲ್ಯಾಂಡ್‌ನಲ್ಲಿ ಕಾಂಗ್ರೆಸ್ ಒಂದು ಸ್ಥಾನ ಗೆದ್ದಿಲ್ಲ. ಎನ್‌ಪಿಎಫ್

2 ಸ್ಥಾನ ಗೆದ್ದರೆ, ಇತರರು 21 ಸ್ಥಾನ ಗೆದ್ದುಕೊಂಡಿದ್ದಾರೆ.ನಾಗಾಲಾಂಡ್ ನಲ್ಲಿ ಈ ಬಾರಿ ಹೆಕಾನಿ ಎಂಬ ಮಹಿಳೆ ಪ್ರಥಮ ಮಹಿಳಾ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


ಮೆಘಾಲಯದಲ್ಲಿ ಬಿಜೆಪಿ 5ನೇ ಸ್ಥಾನ ಸಂಪಾದಿಸಿದೆ. ಎನ್‌ಪಿಪಿ ಪಕ್ಷ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಮೆಘಾಲಯದಲ್ಲಿ ಇದುವರೆಗೆ ಯಾರಿಗೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಎನ್‌ಪಿಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ಸಿಕ್ಕಿಲ್ಲ. ಇನ್ನು ಯುಡಿಪಿ 11 ಸ್ಥಾನಗಳನ್ನ ಗೆದ್ದುಕೊಂಡಿದೆ. ಇಲ್ಲಿ ಕಾಂಗ್ರೆಸ್ 5 ಸ್ಥಾನ ಗೆದ್ದುಕೊಂಡಿದೆ. ಕಾಂಗ್ರೆಸ್ ನಂತರದ ಸ್ಥಾನ ಬಿಜೆಪಿ ಪಡೆದುಕೊಂಡಿದೆ. ಇದುವರಿಗೆನ ಫಲಿತಾಂಶದ ಪ್ರಕಾರ ಬಿಜೆಪಿ 3 ಸ್ಥಾನ ಗೆದ್ದುಕೊಂಡಿದೆ.

Leave a Comment