ಜಮ್ಮು ಕಾಶ್ಮೀರ:ಇಲ್ಲಿನ ಪುಲ್ವಾಮಾದಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕ ಹತನಾಗಿದ್ದು ಒರ್ವ ಯೋಧ ಹುತಾತ್ಮರಾಗಿದ್ದಾರೆ.
ಉಗ್ರರು ಅಡಗಿರುವ ಮಾಹಿತಿ ಖಚಿತ ಮೇರೆಗೆ ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ರಾಜಪೊರಾ ಸಮೀಪದ ಹಂಜಿನಿ ಹಳ್ಳಿಯಲ್ಲಿ ಕಾರ್ಯಾಚರಣೆ ಆರಂಭಿಸಿದವು.
ಅಡಗುತಾಣವನ್ನು ಸುತ್ತವರಿದಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು
ಹಾರಿಸಿದ್ದಾರೆ. ಯೋಧರು ಸಹ ಈ ದಾಳಿಗೆ ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡ ಯೋಧರೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.















