15 ಮಂದಿ ಭಾರತೀಯರಿದ್ದ ಸರಕು ಹಡಗು ಸೋಮಾಲಿಯಾ ಬಳಿ ಅಪಹರಣ.

Coastal Bulletin
15 ಮಂದಿ ಭಾರತೀಯರಿದ್ದ ಸರಕು ಹಡಗು ಸೋಮಾಲಿಯಾ ಬಳಿ ಅಪಹರಣ.

ನವದೆಹಲಿ: 15 ಮಂದಿ ಭಾರತೀಯರಿದ್ದ ಸರಕು ಹಡಗನ್ನು (Cargo Ship) ಸೊಮಾಲಿಯಾ ಬಳಿ ಅಪಹರಣ ಮಾಡಲಾಗಿದ್ದು, ಭಾರತೀಯ ನೌಕಾಪಡೆ (Indian Navy) ತೀವ್ರ ನಿಗಾ ಇರಿಸಿದೆ. ಸೋಮಾಲಿಯಾ ಕರಾವಳಿಯ ಬಳಿ ಗುರುವಾರ ಸಂಜೆ ‘MV LILA NORFOLK’ ಎಂಬ ಸರಕು ಸಾಗಣೆ ಹಡಗನ್ನು ಅಪಹರಿಸಲಾಗಿದ್ದು, ಭಾರತೀಯ ನೌಕಾಪಡೆಯು ಅದರತ್ತ ಯುದ್ಧನೌಕೆಯನ್ನು ಕಳುಹಿಸಿ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಅಪಹರಿಸಿದ ಹಡಗಿನಲ್ಲಿ 15 ಭಾರತೀಯರಿದ್ದಾರೆ. ಸಿಬ್ಬಂದಿಯೊಂದಿಗೆ ಸಂವಹನವನ್ನು ಸ್ಥಾಪಿಸಲಾಗಿದೆ. ಸೇನಾ ಅಧಿಕಾರಿಗಳ ಪ್ರಕಾರ, ಸೊಮಾಲಿಯಾ ಕರಾವಳಿಯಲ್ಲಿ ಹಡಗನ್ನು ಅಪಹರಿಸಿರುವ ಬಗ್ಗೆ ಗುರುವಾರ ಸಂಜೆ ಮಾಹಿತಿ ಲಭಿಸಿದೆ. ಅಲ್ಲದೇ ಭಾರತೀಯ ನೌಕಾಪಡೆಯ ವಿಮಾನವು

ಹಡಗಿನ ಮೇಲೆ ನಿಗಾ ಇರಿಸಿದೆ.

ಸೇನಾಧಿಕಾರಿಗಳ ಪ್ರಕಾರ, ಸೊಮಾಲಿಯಾ ಕರಾವಳಿಯಿಂದ ಹಡಗನ್ನು ಅಪಹರಿಸಲಾಗಿದೆ ಎಂಬ ಮಾಹಿತಿಯು ಗುರುವಾರ ಸಂಜೆ ಲಭ್ಯವಾಗಿದೆ. ಇದು ಮಾತ್ರವಲ್ಲದೆ, ಭಾರತದ ನೌಕಾಪಡೆಯ ವಿಮಾನವು ಆ ಹಡಗಿನ ಮೇಲೆ ನಿಗಾ ವಹಿಸಿದೆ.

Leave a Comment