Coastal Bulletin

ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮೋರ್ಛಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶ ನೀಡಿದೆ.

ಕೇಂದ್ರ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಅ .3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಿಗೆ ಪತ್ರ ಬರೆದು ಆದೇಶಿಸಿದ್ದಾರೆ. ಭಾರತ ಸರಕಾರದ ಗೃಹ ಸಚಿವಾಲಯವು ಈ ಆದೇಶವನ್ನು ಹೊರಡಿಸಿದ್ದು, ಅದರ ಪ್ರತಿಯನ್ನು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೂ ರವಾನಿಸಲಾಗಿದೆ.

ಈ ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ, 2008 ರ ಅಡಿಯಲ್ಲಿ ಬರುವ ಅಪರಾಧ ಎಂಬ ಅಭಿಪ್ರಾಯಕ್ಕೆ ಕೇಂದ್ರ ಸರಕಾರವು ಬಂದಿದೆ. ಅಪರಾಧದ ಗಂಭೀರತೆ ಮತ್ತು ಅದರ ಅಂತರ್

ರಾಜ್ಯ ಪರಿಣಾಮಗಳನ್ನು ಪರಿಗಣಿಸಿ, ಅದನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ 2008 ರ ಪ್ರಕಾರ ತನಿಖೆಗೆ ಒಳಪಡಿಸುವ ಅಗತ್ಯವಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಆದ್ದರಿಂದ ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ, 2008 ರ ಸೆಕ್ಷನ್ 8 ರೊಂದಿಗೆ ಓದಲಾದ ಸೆಕ್ಷನ್ 6 ರ ಉಪ-ವಿಭಾಗ (4) ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ಕೇಂದ್ರ ಸರ್ಕಾರವು ಈ ಮೂಲಕ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಪ್ರವೀಣ್ ನೆಟ್ಟಾರು ‌ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶಿಸುತ್ತದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

Leave a Comment