Coastal Bulletin

ಬ್ರಿಟನ್: ಬ್ರಿಟನ್ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಬೊರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೇರಲು ಕನ್ಸರ್ವೇಟಿವ್ ಪಕ್ಷದಲ್ಲಿ ಭಾರಿ ಪೈಪೋಟಿ ಏರ್ಪಟ್ಟಿತ್ತು. ಪ್ರಮುಖವಾಗಿ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್ ಹಾಗೂ ಲಿಜ್ ಟ್ರಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಲಿಜ್ ಟ್ರಸ್ ಅತೀ ಹೆಚ್ಚಿನ ಮತಗಳ ಮೂಲಕ ಕನ್ಸರ್ವೇಟೀವ್ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿ ಬ್ರಿಟನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಬ್ರಿಟನ್ ಪ್ರಧಾನಿ ಯಾರಾಗಬೇಕು ಎಂದು ಕಳೆದ ಒಂದು ತಿಂಗಳಿನಿಂದ ಮತದಾನ ಪ್ರಕ್ರಿಯೆ ನಡೆದಿತ್ತು. ಇದರಲ್ಲಿ ಲಿಜ್ ಟ್ರಸ್ 82 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರೆ, ರಿಷಿ ಸುನಕ್ 62 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಲಿಜ್ ಟ್ರಸ್ ಬ್ರಿಟನ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಜುಲೈ ತಿಂಗಳಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲೇ ಜಾನ್ಸನ್ ಪ್ರಧಾನಿಯಾಗಿ ಮುಂದುವರಿಯಲು ಭಾರಿ ಅಸಮಾಧಾನ ಎದ್ದಿತ್ತು. ಇದರಿಂದ ತೀವ್ರ ಒತ್ತಡಕ್ಕೆ ಸಿಲುಕಿದ್ದ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ್ದರು. ಬಳಿಕ ಕನ್ಸರ್ವೇಟೀವ್ ಪಕ್ಷ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಲಿದೆ. ಇದರ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ

ಎಂದಿದ್ದರು. ಇದರಿಂದ ಬ್ರಿಟಿನ್ ಪ್ರಧಾನಿ ಆಯ್ಕೆ ರೇಸ್ ಆರಂಭಗೊಂಡಿತ್ತು. ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್(Rishi Sunak) ಆರಂಭಿಕ ಹಂತದಲ್ಲಿ ಭಾರಿ ಮುನ್ನಡೆ ಕಾಯ್ದಕೊಳ್ಳುವ ಮೂಲಕ ಮುಂದಿನ ಬ್ರಿಟನ್ ಪ್ರಧಾನಿ ಎಂದೇ ಗುರುತಿಸಿಕೊಂಡಿದ್ದರು. ಆದರೆ ಅಂತಿಮ ಘಟ್ಟ ತಲುಪುತ್ತಿದ್ದಂತೆ ಲಿಜ್ ಟ್ರಸ್(Liz Truss) ಪ್ರಬಲ ನಾಯಕಿಯಾಗಿ ಗೆಲುವಿನ ನಗೆ ಬೀರಿದ್ದಾರೆ.

Leave a Comment