ನವದೆಹಲಿ (ಸೆ. 5): ಮುಂದಿನ ಸಂಸತ್ ವಿಶೇಷ ಅಧಿವೇಶನದ ವೇಳೆ ದೇಶದ ಹೆಸರನ್ನು ಮರು ನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಲಿದೆ ಎಂದು ವರದಿಯಾಗಿದೆ.
ರಿಪಬ್ಲಿಕ್ ಆಫ್ ಇಂಡಿಯಾ ಎನ್ನುವ ಹೆಸರಿನ ಬದಲು ರಿಪಬ್ಲಿಕ್ ಆಫ್ ಭಾರತ ಎನ್ನುವ ಹೆಸರನ್ನು ಇಡಲು ಸರ್ಕಾರ ತೀರ್ಮಾನ ಮಾಡಿದೆ. ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಮಾಡಲು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸರ್ಕಾರವು ಹೊಸ ನಿರ್ಣಯವನ್ನು ತರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಅದರೊಂದಿಗೆ ಮಂಗಳವಾರ ಬೆಳಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಜಿ20 ಶೃಂಗಸಭೆಯ ಹಿನ್ನಲೆಯಲ್ಲಿ ಸೆ. 9
ರಂದು ರಾತ್ರಿ ಭೋಜನಕೂಟಕ್ಕೆ ರಾಷ್ಟ್ರಪತಿ ಭವನದಿಂದ ಆಹ್ವಾನ ಬಂದಿದೆ. ಸಾಮಾನ್ಯವಾಗಿ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂದು ಉಲ್ಲೇಖವಿರುತ್ತಿತ್ತು. ಆದರೆ, ಈ ಬಾರಿಯ ಪತ್ರದಲ್ಲಿ ಪ್ರೆಸಿಡೆಂಟ್ ಆಫ್ ಭಾರತ್ ಎಂದು ಉಲ್ಲೇಖ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದೂ ಕೂಡ ಅಧಿಕೃತವಾಗಿ ಸರ್ಕಾರ ದೇಶದ ಹೆಸರನ್ನು ಇಂಡಿಯಾ ಎನ್ನುವುದರ ಬದಲು ಭಾರತ್ ಎಂದು ಮರುನಾಮಕರಣ ಮಾಡಲಿದೆ ಎನ್ನುವ ಸೂಚನೆ ನೀಡಿದೆ.















