ಮೈಚಾಂಗ್​ ಚಂಡಮಾರುತ ಎಫೆಕ್ಟ್​: ಭಾರೀ ಮಳೆಗೆ ತತ್ತರಿಸಿದ ತಮಿಳುನಾಡು!

Coastal Bulletin
ಮೈಚಾಂಗ್​ ಚಂಡಮಾರುತ ಎಫೆಕ್ಟ್​: ಭಾರೀ ಮಳೆಗೆ ತತ್ತರಿಸಿದ ತಮಿಳುನಾಡು!

ತಮಿಳುನಾಡು: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ತೀವ್ರವಾಗಿರುವ ಮೈಚಾಂಗ್​ ಚಂಡಮಾರುತದ ಪರಿಣಾಮ ಇದೀಗ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ನಗರ ಪ್ರದೇಶ ಸೇರಿದಂತೆ ಏರ್​ಪೋರ್ಟ್​ ಸಂಪೂರ್ಣ ಜಲಾವೃತಗೊಂಡಿದೆ.

ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯವು ತೀವ್ರ ಸಂಕಷ್ಟ ಎದುರಿಸುತ್ತಿದೆ. ಮೈಚಾಂಗ್ ಚಂಡಮಾರುತದ ತೀವ್ರತೆಯಿಂದ ಸ್ಥಳೀಯರು ಕಂಗಾಲಾಗಿದ್ದಾರೆ. ಗಾಳಿ ಸಹಿತ ಸುರಿಯುತ್ತಿರುವ ಬಿರುಸಿನ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳಲ್ಲಿ ನಿಂತಿರುವ ಕಾರುಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿರುವ ಕೆಲವು ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.


ಇನ್ನು ತಮಿಳುನಾಡಿನ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್ ಕೂಡ ಪ್ರವಾಹಕ್ಕೆ ತುತ್ತಾಗಿದ್ದು, ನೀರಿನಿಂದ ಮುಳುಗಡೆಯಾಗಿದೆ.

ದೃಶ್ಯಗಳನ್ನು ಕೆಳಗಿನ ಲಿಂಕ್​ನಲ್ಲಿ ನೋಡಬಹುದು. ಸದ್ಯದ ವರದಿ ಪ್ರಕಾರ, ಪ್ರಕೃತಿ ವಿಕೋಪಕ್ಕೆ ಚೆನ್ನೈನಲ್ಲಿ ಇಲ್ಲಿಯವರೆಗೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿದೆ.

ಮೈಚಾಂಗ್ ಚಂಡಮಾರುತದ ಹಿನ್ನೆಲೆ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿನ ಎಲ್ಲಾ ಶಾಲಾ- ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಉದ್ಯಮಗಳು, ನಿಗಮ, ಮಂಡಳಿ, ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಕಚೇರಿಗಳು ಸೇರಿದಂತೆ ಸರ್ಕಾರಿ ಕಚೇರಿಗಳನ್ನು ಡಿಸೆಂಬರ್ 5 ರವರೆಗೂ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

Leave a Comment