Coastal Bulletin

ನವದೆಹಲಿ: ದೇಶದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳ ಜೊತೆಗೆ ಒಮಿಕ್ರಾನ್ ಗಳ ಸಂಖ್ಯೆಯು ಹೆಚ್ಚುತ್ತಿದೆ.ಇದರ ಬಗ್ಗೆ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿ ಮೋದಿ ನಾಳೆ ಚರ್ಚೆ ಮಾಡಲಿದ್ದಾರೆ.

ನಾಳೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಲಿದ್ದಾರೆ. ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬಿಗಿಕ್ರಮ, ಆಕ್ಸಿಜನ್, ವೈದ್ಯಕೀಯ ಮೂಲಸೌಕರ್ಯ ವ್ಯವಸ್ಥೆ ಬಲವರ್ಧನೆ, ಲಸಿಕೆ ನೀಡಿಕೆಗೆ ವೇಗ ಸೇರಿದಂತೆ ಹಲವು ವಿಷಯಗಳ

ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

ನಾಳೆ ಸಂಜೆ 6.30 ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಎಲ್ಲಾ ರಾಜ್ಯಗಳ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳಿಂದ  ಮಾಹಿತಿ ಪಡೆದು ಕೊರೋನಾ ತಡೆಗೆ ಕೈಗೊಳ್ಳಬೇಕಿರುವ ಪರಿಣಾಮಕಾರಿ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದು ಸೂಚನೆ ನೀಡಲಿದ್ದಾರೆ.

Leave a Comment