ಬೆಂಗಳೂರು: ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ಮಂಗಳವಾರ ನಡೆಯಲಿದ್ದು, ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ. ಕರ್ನಾಟಕದಲ್ಲಿ ಇದು ಎರಡನೇ ಹಂತದ ಮತದಾನವಾಗಿದೆ. ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇದೀಗ ಮೂರನೇ ಹಂತದಲ್ಲಿ 11 ರಾಜ್ಯಗಳ 92 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ ಒಟ್ಟು 1300 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದು, ಅವರಲ್ಲಿ ಸುಮಾರು 120 ಮಹಿಳೆಯರಾಗಿದ್ದಾರೆ.
ಕರ್ನಾಟಕದ ಯಾವೆಲ್ಲ ಕ್ಷೇತ್ರಗಳಲ್ಲಿ ಮತದಾನ?
ಬಾಗಲಕೋಟೆ
ಬೆಳಗಾವಿ
ಬಳ್ಳಾರಿ
ಬೀದರ್
ವಿಜಯಪುರ
ಚಿಕ್ಕೋಡಿ
ದಾವಣಗೆರೆ
ಧಾರವಾಡ
ಹಾವೇರಿ
ಕೊಪ್ಪಳ
ಗುಲ್ಬರ್ಗ
ರಾಯಚೂರು
ಶಿವಮೊಗ್ಗ
ಉತ್ತರ ಕನ್ನಡ
ಮತದಾನದ ಸಮಯ
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರ ವರೆಗೆ ನಡೆಯಲಿದೆ. ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದವರಿಗೆ 6ರ ನಂತರವೂ ಅವಕಾಶ ದೊರೆಯಲಿದೆ.
ಮೂರನೇ ಹಂತದಲ್ಲಿ ಗುಜರಾತ್ನ 25, ಕರ್ನಾಟಕದ 14, ಮಹಾರಾಷ್ಟ್ರದ 11,
ಮಧ್ಯಪ್ರದೇಶದ 8, ಛತ್ತೀಸ್ಗಢದ 7, ಬಿಹಾರದ 5, ಅಸ್ಸಾಂನ 4, ಉತ್ತರ ಪ್ರದೇಶದ 10, ಪಶ್ಚಿಮ ಬಂಗಾಳದ 4, ಗೋವಾದ 2, ದಾದರ್-ನಗರ ಹವೇಲಿಯ 2 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು.









