ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಉದ್ವಿಗ್ನತೆ ಹೆಚ್ಚಿದ್ದು, ಎರಡೂ ರಾಷ್ಟ್ರಗಳ ನಡುವೆ ಯುದ್ಧ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ, ಪರಿಸ್ಥಿತಿಯ ನಿಯಂತ್ರಣ ಮತ್ತು ನಾಗರಿಕರ ರಕ್ಷಣೆಗಾಗಿ 'ಯುದ್ಧಾಭ್ಯಾಸ' ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಸೋಮವಾರ ಸೂಚಿಸಿದೆ.
ಎಲ್ಲ ರಾಜ್ಯ ಸರ್ಕಾರಗಳು ಮೇ 7 ರಂದು ಅಣಕು ಸಮರಾಭ್ಯಾಸ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದ್ದಾಗಿ ಸರ್ಕಾರಿ ಮೂಲಗಳು ತಿಳಿಸಿವೆ.
ಅಪಾಯದ ವೇಳೆ ವಾಯುದಾಳಿಯ ಎಚ್ಚರಿಕೆ ಸೈರನ್ (ಸದ್ದು) ಅರಿತುಕೊಳ್ಳುವುದು, ದಾಳಿಯ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಾಗರಿಕರಿಗೆ ತರಬೇತಿ ನೀಡುವಂತೆಯೂ ಕೇಂದ್ರ ಹೇಳಿದೆ. ಇದರ ಜೊತೆಗೆ, ಪ್ರಮುಖ ಸ್ಥಾವರಗಳ ರಕ್ಷಣೆ, ಅವುಗಳ ಮರೆಮಾಚುವಿಕೆ, ಸ್ಥಳಾಂತರ ಮತ್ತು ಅಪಾಯದ ವೇಳೆ ನಿರ್ವಹಿಸಬೇಕಾದ ಕ್ರಮಗಳ ಬಗ್ಗೆ ಪೂರ್ವಾಭ್ಯಾಸ ನಡೆಸಲೂ ತಿಳಿಸಿದೆ.
ಏಪ್ರಿಲ್ 22 ರಂದು ಪಹಲ್ಗಾಮ್ನನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿಂದಿನ ರೂವಾರಿ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಇಡೀ ದೇಶವೇ ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳ ನಾಯಕರೊಂದಿಗೆ ಸರಣಿ ಸಭೆ ನಡೆಸಿದ್ದಾರೆ.
ಪ್ರವಾಸಿಗರ ಹತ್ಯಾಕಾಂಡ ನಡೆಸಿದ ಉಗ್ರರು ಮತ್ತು ಅವರಿಗೆ ಬೆಂಬಲ ನೀಡಿದವರಿಗೆ ಕಲ್ಪನೆಗೂ ಮೀರಿದ ಶಿಕ್ಷೆ ನೀಡಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ವಾಗ್ದಾನ ಮಾಡಿದ್ದಾರೆ.
style="font-size: 14px;">1971 ರಲ್ಲಿ ಸಮರಾಭ್ಯಾಸ ನಡೆಸಿದ್ದ ದೇಶ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯ ನಡುವೆ ಎಲ್ಲ ರಾಜ್ಯಗಳಿಗೆ ಪೂರ್ವಾಭ್ಯಾಸ ನಡೆಸಲು ಸೂಚನೆ ನೀಡಲಾಗಿದೆ. ಇದಕ್ಕೂ ಮೊದಲು ಅಂದರೆ 1971 ರಲ್ಲಿ ಭಾರತ-ಪಾಕಿಸ್ತಾನದ ನಡುವೆ ನಡೆದಿದ್ದ ಯುದ್ಧದ ವೇಳೆ ಇದೇ ರೀತಿಯ ಸೂಚನೆ ನೀಡಲಾಗಿತ್ತು.
ಉಭಯ ರಾಷ್ಟ್ರಗಳ ನಡುವೆ ನಡೆದ ಅಂದಿನ ಯುದ್ಧಕ್ಕೂ ಮೊದಲು ದೇಶದ ನಾಗರಿಕರ ರಕ್ಷಣೆಗಾಗಿ ಪೂರ್ವ ತಯಾರಿ ನಡೆಸಲು ರಾಜ್ಯ ಸರ್ಕಾರಗಳಿಗೆ ತಾಕೀತು ಮಾಡಲಾಗಿತ್ತು. ಅಂದಿನ ಯುದ್ಧದಲ್ಲಿ ಪಾಕಿಸ್ತಾನವು ಭಾರತದ ಮುಂದೆ ಮಂಡಿಯೂರಿತ್ತು. ಇತ್ತ ಬಾಂಗ್ಲಾದೇಶವು ವಿಮೋಚನೆ ಹೊಂದಿತ್ತು.
ಇವುಗಳನ್ನು ಮಾಡಲು ಕೇಂದ್ರ ಸೂಚನೆ
ವಾಯುದಾಳಿ ಎಚ್ಚರಿಕೆ ಸೈರನ್‌ಗಳ ಕಾರ್ಯಾಚರಣೆ
ದಾಳಿಯ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಾಗರಿಕರಿಗೆ ರಕ್ಷಣಾ ಅಂಶಗಳ ಕುರಿತು ತರಬೇತಿ
ಕ್ರ್ಯಾಶ್ ಬ್ಲ್ಯಾಕೌಟ್ ಕ್ರಮಗಳನ್ನು ಒದಗಿಸುವುದು
ಪ್ರಮುಖ ಸ್ಥಾವರಗಳು, ಅಣೆಕಟ್ಟುಗಳ ಬಗ್ಗೆ ಎಚ್ಚರ
ಸ್ಥಳಾಂತರಿಸುವ ಯೋಜನೆಯ ನವೀಕರಣ ಮತ್ತು ಅದರ ಪೂರ್ವಾಭ್ಯಾಸ














