ದೆಹಲಿ:ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಸಂಪುಟಕ್ಕೆ ಹೊಸದಾಗಿ ಸೇರುವ ನಿರೀಕ್ಷೆಯಲ್ಲಿರುವ ನಾಯಕರು ಮೋದಿ ಭೇಟಿಯಾಗಲು ಕಾಯುತ್ತಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು,ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡ ರವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಚಿಕ್ಕಮಗಳೂರು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದ್ದು, ಕರಂದ್ಲಾಜೆ ಕೂಡ ಮೋದಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಪ್ರಧಾನ ಮಂತ್ರಿ
ನರೇಂದ್ರ ಮೋದಿಯವರು 2ನೇ ಅವಧಿಯಲ್ಲಿ ಮೊದಲನೇ ಹಂತದ ಬೃಹತ್ ಸಚಿವ ಸಂಪುಟ ಪುನರಚಿಸುವ ಮೊದಲೇ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಸೇರಿದಂತೆ ಹಲವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.















