ಆಪ್​ ವರಿಷ್ಠ ಅರವಿಂದ್ ಕೇಜ್ರಿವಾಲ್​ಗೆ ಭಾರಿ ಆಘಾತ: ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೂ ಸೋಲು

Coastal Bulletin
ಆಪ್​ ವರಿಷ್ಠ ಅರವಿಂದ್ ಕೇಜ್ರಿವಾಲ್​ಗೆ ಭಾರಿ ಆಘಾತ: ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೂ ಸೋಲು

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾಗಶಃ ಹೊರಬಿದ್ದಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೋಲು ಅನುಭವಿಸಿದ್ದಾರೆ. 70 ಸ್ಥಾನಗಳಲ್ಲಿ ಬಹುಮತಕ್ಕೆ ಅಗತ್ಯವಿರುವ 40 ಸ್ಥಾನಗಳಿಗಿಂತ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಜಿದ್ದಾ ಜಿದ್ದಿನ ಕದನದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಿಜೆಪಿಯ ಪರ್ವೇಶ್‌ ವರ್ಮಾ ವಿರುದ್ಧ 3 ಸಾವಿರ ಮತಗಳಿಂದ ಪರಾಜಯಗೊಂಡರೆ, ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಮಾರ್ವಾ ವಿರುದ್ಧ 675 ಮತಗಳಿಂದ ಸೋಲು ಅನುಭವಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಅವರ ಸೋಲು ಎಎಪಿಗೆ ಭಾರೀ ಮುಖಭಂಗವಾಗಿದೆ.

ಕೇಜ್ರಿವಾಲ್​ 4ನೇ ಭಾರಿಗೆ ಚುನಾವಣೆಗೆ ಸ್ಫರ್ಧಿಸಿದ್ದರು. 3 ಸಲ ಭಾರಿ

ಅಂತರದಿಂದ ಗೆಲುವು ಸಾಧಿಸಿದ್ದ ಇವರು ಈ ಸಲ ಪರಾಭವಗೊಂಡಿದ್ದಾರೆ. ಬಿಜೆಪಿಗೆ ಬಹುಮತ ಬಂದರೆ ಇಡೀ ಚುನಾವಣಾ ಪ್ರಚಾರದಲ್ಲಿ ಮುಂಚೂಣಿಯಲ್ಲಿದ್ದ ದಿಲ್ಲಿಯ ಬಿಜೆಪಿ ಅಭ್ಯರ್ಥಿ ಪ್ರವೇಶ್ ವರ್ಮಾ ಸಿಎಂ ಅಭ್ಯರ್ಥಿ ಆಗುವಲ್ಲಿ ಮುಂದಿದ್ದಾರೆಂದು ವಿಶ್ಲೇಷಕರು ಅಂದಾಜಿಸಿದ್ದಾರೆ.

ನಾಲ್ಕನೇ ಬಾರಿಗೆ ಮರುಚುನಾವಣೆ ಬಯಸಿದ್ದ ಕೇಜ್ರಿವಾಲ್, ಕಳೆದ ಮೂರು ಚುನಾವಣೆಗಳಿಂದ ಅವರ ಭದ್ರಕೋಟೆಯಾಗಿರುವ ನವದೆಹಲಿ ವಿಧಾನಸಭಾ ಸ್ಥಾನವನ್ನು ಗೆಲ್ಲುವ ಭರವಸೆ ಹೊಂದಿದ್ದರು. ಆದರೆ, ಬಿಜೆಪಿ ಮುಂದೆ ಸೋಲು ಒಪ್ಪಿಕೊಂಡಿದೆ. ಈ ಬಾರಿ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದು, ದೆಹಲಿ ಸಿಎಂ ರೇಸ್‌ನಲ್ಲೂ ಮುಂಚುಣಿಯಲ್ಲಿದ್ದಾರೆ.

Leave a Comment