Coastal Bulletin

ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಇಂದು ಗುರುವಾರ ನಡೆಯಲಿದ್ದು, ಪ್ರಸ್ತುತ ನಾಲ್ಕು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ  ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ.

ಮಾರ್ಚ್ 10 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಗಳ ಎಣಿಕೆಯಲ್ಲಿ ಮೊದಲು ಬ್ಯಾಲೆಟ್ ಪೇಪರ್ ಮತಗಳನ್ನು ಎಣಿಕೆ ಮಾಡಲಾಗುವುದು, ನಂತರ ಇವಿಎಂ ಮತಗಳನ್ನು ಎಣಿಕೆ ಮಾಡಲಾಗುತ್ತದೆ.

ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು, ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಉತ್ತರಾಖಂಡ ಮತ್ತು ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

Leave a Comment