ಮುಂಬೈ : 2012 ರಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಪ್ರಕರಣದ ಮಾದರಿಯಲ್ಲೇ ಮುಂಬೈನಲ್ಲೊಂದು ಹೇಯ ಘಟನೆ ಬೆಳಕಿಗೆ ಬಂದಿತ್ತು. ಈ ಪ್ರಕರಣ ಇಡೀ ದೇಶದ ಜನರನ್ನ ಆಕ್ರೋಶಕ್ಕೆ ಗುರಿಯಾಗಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋದಲ್ಲಿ ಮಹಿಳೆಯನ್ನು ಅತ್ಯಾಚಾರ ಮಾಡಲಾಗಿದೆ. ಘಟನೆಯಿಂದ ತೀವ್ರ ಅಸ್ವಸ್ಥಳಾಗಿದ್ದ ಸಂತ್ರಸ್ತೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಅನೇಕರು ಆಕೆಯ ಜೀವ ಉಳಿಯಲು ಪ್ರಾರ್ಥನೆ ಸಲ್ಲಿಸಿದ್ರು ಫಲಿಸಲಿಲ್ಲ. ಸಂತ್ರಸ್ತೆಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರೋದಾಗಿ ತಿಳಿದುಬಂದಿದೆ.
ಮುಂಬೈನ ಸಾಕಿನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಚಿತ್ರ ಹಿಂಸೆ ನೀಡಿ, ಬಳಿಕ ಆಕೆಯನ್ನು ಅತ್ಯಾಚಾರ ಎಸಗಿದ್ದಾನೆ. ಆಕೆಯ ಮೇಲೆ ಹಲ್ಲೆ ನಡೆಸುತ್ತಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿದೆ. ಆರೋಪಿಯು ಮಹಿಳೆಗೆ ಥಳಿಸಿ,
ಹಲ್ಲೆ ಮಾಡಿ ಅತ್ಯಾಚಾರವೆಸಗಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಸತತ 33 ಗಂಟೆಗಳ ನರಳಾಟದ ಬಳಿಕ ಸಂತ್ರಸ್ತೆ ಮೃತಪಟ್ಟಿದ್ದಾರೆ. ಮುಂಬೈ ಪೊಲೀಸರು ಆರೋಪಿ ಮೋಹನ್ ಚೌಹಾಟ್ ನನ್ನು ಬಂಧಿಸಿದ್ದಾರೆ. ದೇಶಾದ್ಯಂತ ಆತನನ್ನ ಗಲ್ಲಿಗೇರಿಸುವಂತೆ ಕೂಗ ಹೆಚ್ಚಾಗಿದೆ.















