ವಾಷಿಂಗ್ಟನ್ : ಭ್ರಷ್ಟಾಚಾರ ಮತ್ತು ಪೆಗಾಸಸ್ ಸ್ಪೈವೇರ್ ಸೇರಿದಂತೆ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ಭಾರತೀಯ ಮೂಲದ ಅಮೆರಿಕನ್ ವೈದ್ಯರೊಬ್ಬರು ಪ್ರಧಾನಿ ನರೇಂದ್ರ ಮೋದಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಉದ್ಯಮಿ ಗೌತಮ್ ಅದಾನಿ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸ್ಟ್ರಿಕ್ಟ್ ಆಫ್ ಕೊಲಂಬಿಯಾ ಕೋರ್ಟ್ ಎಲ್ಲ ನಾಯಕರಿಗೆ ಈಗಾಗಲೇ ಸಮನ್ಸ್ ಜಾರಿ ಮಾಡಿದೆ. ನ್ಯೂಯಾರ್ಕ್ನಲ್ಲಿ ವಾಸವಾಗಿರುವ ಪ್ರಸಿದ್ಧ ವಕೀಲ ರವಿ ಬಾತ್ರಾ ಈ ಕೇಸ್‌ನಲ್ಲಿ ವಾದ ಮಂಡಿಸಲಿದ್ದಾರೆ.
ಗ್ಯಾಂಸ್ಟ್ರೋಎಂಟರಾಲಜಿಸ್ಟ್ ಡಾ.ಲೋಕೇಶ್ ಮೊಕದ್ದಮೆ ಹೂಡಿದವರು. ಮೋದಿ, ಜಗನ್ ಮೋಹನ್ ರೆಡ್ಡಿ ಮತ್ತು ಅದಾನಿ ಸೇರಿದಂತೆ ಇತರರು ಯುಎಸ್‌ಗೆ ಭಾರಿ ನಗದು ವರ್ಗಾವಣೆ ಮಾಡಿದ್ದಾರೆ
ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪೆಗಾಸಸ್ ಸ್ಪೈವೇರ್ ಬಳಸಿ ವಿವಿಧ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಅನ್ನೋದು ಅವರ ಆರೋಪ. ಮೇ 24ರಂದು ಮೊಕದ್ದಮೆ ದಾಖಲಿಸಲಾಗಿದೆ.














