ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!

Coastal Bulletin
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!

ಹೈದರಾಬಾದ್: ಖ್ಯಾತ ಗಾಯಕಿ ಮಂಗ್ಲಿ (Singer Mangli) ಬರ್ತಡೇ ಪಾರ್ಟಿ ವೇಳೆ ಪೊಲೀಸರು (Police) ದಾಳಿ ನಡೆಸಿ, ಮಾದಕ ವಸ್ತು ಸೇವಿಸಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್‍ನಲ್ಲಿ ಬರ್ತಡೇ ಪಾರ್ಟಿ ನಡೆಯುತ್ತಿತ್ತು. ಈ ವೇಳೆ, ಚೆವೆಲ್ಲಾ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆಯಾಗಿದೆ.

ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಡಿಕಲ್ ಟೆಸ್ಟ್‌ನಲ್ಲಿ ಹಲವರು ಮಾದಕ ವಸ್ತು

ಸೇವಿಸಿರೋದು ಪತ್ತೆಯಾಗಿದೆ. ಈ ಸಂಬಂಧ ಚೆವೆಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಳಿ ವೇಳೆ ಪೊಲೀಸರು ವಿಡಿಯೋ ಮಾಡಿದ್ದು, ಮಂಗ್ಲಿ, ವಿಡಿಯೋ ಮಾಡೋದು ನಿಲ್ಲಿಸ್ತಿಯೋ ಇಲ್ವೋ ಎಂದು ಪೊಲೀಸರ ಮೇಲೆ ಗದರಿದ್ದಾಳೆ. ಇದಕ್ಕೆ, ನನ್ನ ಕೆಲಸ ನಾನು ಮಾಡ್ತಿದ್ದೇನೆ ಎಂದು ಪೊಲೀಸ್ ಸಿಬ್ಬಂದಿ ಉತ್ತರಿಸಿದ್ದಾರೆ.

Leave a Comment