ಅಹ್ಮದಾಬಾದ್: ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆ 2022ರ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, ಈ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
182 ಸ್ಥಾನಗಳ ವಿಧಾನಸಭೆಯಲ್ಲಿ 89 ಸ್ಥಾನಗಳಿಗೆ ಮೊದಲ ಹಂತದಲ್ಲಿ ಇಂದು ಮತದಾನ ನಡೆಯುತ್ತಿದೆ. 89 ಸ್ಥಾನಕ್ಕೆ 788 ಜನ ಸ್ಪರ್ಧೆ ಮಾಡಿದ್ದು, ಉಳಿದ 93 ಸ್ಥಾನಗಳಿಗೆ ಡಿ.5 ರಂದು ಮತದಾನ ನಡೆಯಲಿದೆ. ಡಿ.8 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಬಿಜೆಪಿ, ಕಾಂಗ್ರೆಸ್ ಆಪ್ ಚುನಾವಣಾ
ಕದನದಲ್ಲಿ ಹೋರಾಟ ಮಾಡುತ್ತಿವೆ.
ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನ 19 ಜಿಲ್ಲೆಗಳ 89 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಜರುಗಲಿದ್ದು, ಮತದಾನಕ್ಕೆ 34,324 ಬ್ಯಾಲೆಟ್ ಯೂನಿಟ್, 34,324 ಕಂಟ್ರೋಲ್ ಯೂನಿಟ್ ಮತ್ತು 38,749 ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗಿದೆ.















