ಅಹಮದಾಬಾದ್ ವಿಮಾನ ದುರಂತ;ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ,ಮಂಗಳೂರು ಮೂಲದ ಕೋ ಪೈಲಟ್ ಸೇರಿದಂತೆ ಎಲ್ಲಾ 242 ಮಂದಿ ಸಾವು ಸಾಧ್ಯತೆ

Coastal Bulletin
ಅಹಮದಾಬಾದ್ ವಿಮಾನ ದುರಂತ;ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ,ಮಂಗಳೂರು ಮೂಲದ ಕೋ ಪೈಲಟ್ ಸೇರಿದಂತೆ ಎಲ್ಲಾ 242 ಮಂದಿ ಸಾವು ಸಾಧ್ಯತೆ

ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಟೇಕ್ ಆಫ್ ಆದ 10 ನಿಮಿಷದಲ್ಲಿ ವಿಮಾನದ ಸಿಗ್ನಲ್ ಕಡಿತಗೊಂಡಿತು. ಬಳಿಕ ವಿಮಾನ ಪತನವಾಗಿದ್ದು, ಆಕಾಶದ ತುಂಬ ದಟ್ಟ ಹೊಗೆ ಆವರಿಸಿಕೊಂಡಿತು. ಈ ದೃಶ್ಯವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಈ ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು, ಎಷ್ಟು ಜನರು ಸಾವನ್ನಪ್ಪಿದ್ದಾರೆ.

ಅಹಮದಾಬಾದ್ ವಿಮಾನ ದುರಂತ; ಕರ್ನಾಟಕ ಮೂಲದ ಕೋ ಪೈಲಟ್ ಸಾವು

ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಕರ್ನಾಟಕದ ಕರಾವಳಿ ಮೂಲದ ಕ್ಲೈವ್‌ ಕುಂದರ್‌ ದುರ್ಮರಣವನ್ನಪ್ಪಿದ್ದಾರೆ. ಪತನಗೊಂಡಿದ್ದ ವಿಮಾನದ ಕೋ ಪೈಲಟ್ ಆಗಿದ್ದ ಕ್ಲೈವ್‌ ಕುಂದರ್‌ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮುಂಬೈನಲ್ಲಿ ವಾಸವಿದ್ದ ಕರ್ನಾಟಕ ಮೂಲದ ಕ್ಲೈವ್‌ ಕುಂದರ್‌ ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ ಅನುಭವವಿತ್ತು.

ಏರ್ ಇಂಡಿಯಾ ವಿಮಾನದಲ್ಲಿದ್ದ ಎಲ್ಲ 242 ಪ್ರಯಾಣಿಕರ ಸಾವು ಸಾಧ್ಯತೆ

ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ. ಅಲ್ಲದೆ, ಅಹಮದಾಬಾದ್ ಪೊಲೀಸರು ಕೂಡ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದಿದ್ದಾರೆ.

ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ

ಏರರ ಇಂಡಿಯಾ ಪತನವಾದಾಗ ಆ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು. ಅವರು ಈ

ದುರಂತದಲ್ಲಿ ಮೃತಪಟ್ಟಿರುವುದು ದೃಢವಾಗಿದೆ. ಹಲವು ರಾಜಕೀಯ ನಾಯಕರು ರೂಪಾನಿ ಅವರ ದುರಂತ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ವೈದ್ಯರ ಹಾಸ್ಟೆಲ್ಗೆ ವಿಮಾನ ಡಿಕ್ಕಿ

ಅಹಮದಾಬಾದ್ ನಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಏರ್ ಇಂಡಿಯಾ ವಿಮಾನ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಲಂಡನ್ ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಇಂದು ಮಧ್ಯಾಹ್ನ ಅಹಮದಾಬಾದ್ ನಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ವಿಮಾನ ನಿಲ್ದಾಣದ ಪರಿಧಿಯ ಬಳಿ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ ಎಂದು ANI ವರದಿ ಮಾಡಿದೆ.

ಅಹಮದಾಬಾದ್ ನಿಂದ ಹೊರಟ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ 5 ನಿಮಿಷಗಳಲ್ಲಿ ಪತನ

ಅಹಮದಾಬಾದ್ ನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ 5 ನಿಮಿಷಗಳಲ್ಲಿ ಪತನಗೊಂಡಿದೆ ಎಂದು ಡಿಜಿಸಿಎ ತಿಳಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನ ನಿಲ್ದಾಣವನ್ನು ಸಹ ಮುಚ್ಚಲಾಗಿದೆ.

Leave a Comment