ಗುಜರಾತ್ : ಗುಜರಾತಿನ ಆನಂದ್ ನಲ್ಲಿ ನಡೆದ ಸರಣಿ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಶಾಸಕರೊಬ್ಬರ ಅಳಿಯ ಕೇತನ್ ಪದಿಯಾರ್ ಚಲಾಯಿಸುತ್ತಿದ್ದ ಕಾರು ಆಟೋ ಮತ್ತು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ.
ಬೈಕ್ ನಲ್ಲಿದ್ದ ಇಬ್ಬರು ಮತ್ತು ಆಟೋದಲ್ಲಿದ್ದ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಎ ಎಸ್ ಪಿ
ಅಭಿಷೇಕ್ ಗುಪ್ತಾ ತಿಳಿದಿದ್ದಾರೆ.
ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಕಾರು ಅತೀ ವೇಗದಲ್ಲಿ ಚಲಿಸುತ್ತಿದ್ದುದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
















