ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜನ್ ಲಾಲ್ ಶರ್ಮಾ ರಾಜಸ್ಥಾನ ಮುಖ್ಯಮಂತ್ರಿಯಾಗಿ ಆಯ್ಕೆ.

Coastal Bulletin
ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜನ್ ಲಾಲ್ ಶರ್ಮಾ ರಾಜಸ್ಥಾನ ಮುಖ್ಯಮಂತ್ರಿಯಾಗಿ ಆಯ್ಕೆ.

ಜೈಪುರ (ರಾಜಸ್ಥಾನ): ಚುನಾವಣಾ ಫಲಿತಾಂಶದಲ್ಲಿ ಭರ್ಜರಿ ಬಹುಮತ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಭಾರತೀಯ ಜನತಾ ಪಕ್ಷ ನೂತನ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಸಂಗನೇರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆದ ಭಜನ್ ಲಾಲ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ.

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿರುವ ಶರ್ಮಾ ನೇರವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. 56 ವರ್ಷದ ಶರ್ಮಾ ಅವರು ಸಂಗನೇರ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿದ್ದಾರೆ, ಅಲ್ಲಿ ಅವರು ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ 1,45,162 ಮತಗಳನ್ನು ಪಡೆದಿದ್ದು, ಕಾಂಗ್ರೆಸ್

ಅಭ್ಯರ್ಥಿ ಪುಷ್ಪೇಂದ್ರ ಭಾರದ್ವಾಜ್ ಅವರನ್ನು 48,000 ಮತಗಳಿಂದ ಸೋಲಿಸಿದ್ದರು.

ಸಂಗನಾರ್ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದೇ ಹೇಳಬಹುದು. ಆ ಕ್ಷೇತ್ರದಲ್ಲಿ ಭಜನ್ ಲಾಲ್ ಶರ್ಮಾ ಗೆದ್ದರು. ಬಿಜೆಪಿ ಮತ್ತು ಆರೆಸ್ಸೆಸ್ ಸಂಘಟನೆಯಲ್ಲಿ ಅವರ ಪ್ರಮುಖ ಪಾತ್ರವನ್ನು ಪರಿಗಣಿಸಿ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ.

Leave a Comment