ಸಂಸತ್ ಭವನದೊಳಗೆ ದಾಳಿ ಪ್ರಕರಣ - ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೊಳಪಡಿಸಲು ಸಿದ್ದರಾಮಯ್ಯ ಆಗ್ರಹ. ತಪ್ಪು ಮಾಡಿದಲ್ಲಿ ಮಗನನ್ನು ಗಲ್ಲಿಗೇರಿಸಿ- ಬಂಧಿತ ಆರೋಪಿ ಮನೋರಂಜನ್ ತಂದೆ ಹೇಳಿಕೆ.

Coastal Bulletin
ಸಂಸತ್ ಭವನದೊಳಗೆ ದಾಳಿ ಪ್ರಕರಣ - ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೊಳಪಡಿಸಲು ಸಿದ್ದರಾಮಯ್ಯ ಆಗ್ರಹ. ತಪ್ಪು ಮಾಡಿದಲ್ಲಿ ಮಗನನ್ನು ಗಲ್ಲಿಗೇರಿಸಿ- ಬಂಧಿತ ಆರೋಪಿ ಮನೋರಂಜನ್ ತಂದೆ ಹೇಳಿಕೆ.

ದೆಹಲಿ: ಏಕಾಏಕಿ ಇಬ್ಬರು ಯುವಕರು ಸಂಸತ್ತಿಗೆ ನುಗ್ಗಿ ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್ ಕುರ್ಚಿಯತ್ತ ದುಷ್ಕೃತ್ಯ ಮೆರೆದ ಹಿನ್ನೆಲೆಯಲ್ಲಿ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ. ಸಂಸತ್ತಿನ ಹೊರಗೆ ಬಂಧಿಸಿದವರನ್ನು ಹರಿಯಾಣದ ಹಿಸಾರ್ ನಿವಾಸಿ ನೀಲಂ (42) ಮತ್ತು ಮಹಾರಾಷ್ಟ್ರದ ಲಾತೂರ್ ನಿವಾಸಿ ಅಮೋಲ್ ಶಿಂಧೆ (25) ಎಂದು ಗುರುತಿಸಲಾಗಿದೆ. ಮತ್ತಿಬ್ಬರನ್ನು ಸಾಗರ್ ಶರ್ಮಾ ಮತ್ತು ಮನೋರಂಜನ್ ಎಂದು ತಿಳಿದುಬಂದಿದೆ. ಬಂಧಿತನಾದ ಮನೋರಂಜನ್ ಮೈಸೂರು ಮೂಲದವನಾಗಿದ್ದು, ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್‌ ನಿವಾಸಕ್ಕೆ ಪೊಲೀಸರು ದೌಡಾಯಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಮನೋರಂಜನ್ ತಂದೆ ದೇವರಾಜೇಗೌಡ ಅವರಿಂದ ಮಾಹಿತಿಪಡೆದುಕೊಂಡಿದ್ದಾರೆ. ಈ ಬಗ್ಗೆ ಮನೋರಂಜನ್ ಅವರ ತಂದೆ ದೇವರಾಜೇಗೌಡ ಪ್ರತಿಕ್ರಿಯಿಸಿದ್ದು, ಮನೋರಂಜನ್ ಬಿಇ ಮುಗಿಸಿದ್ದ, ನನ್ನ ಮಗನಿಗೆ ಬಿಇ ಸೀಟ್ ಕೊಡಿಸಿದ್ದು ಎಚ್.ಡಿ. ದೇವೇಗೌಡರು. ದೆಹಲಿ, ಬೆಂಗಳೂರಿಗೆ ಓಡಾಡುತ್ತಿದ್ದ. ಆದರೆ ಪುತ್ರ ಮನೋರಂಜನ್ ಎಲ್ಲಿಗೆ ಹೋಗಿದ್ದಾನೆಂದು ಗೊತ್ತಿಲ್ಲ. ನಾವು ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ನನ್ನ ಪುತ್ರ ಯಾಕೆ ಈ ರೀತಿ ಮಾಡಿದ್ದಾನೆ ಎಂದು ಗೊತ್ತಿಲ್ಲ.ಆತ ಪ್ರಾಮಾಣಿಕನಾಗಿದ್ದು ವಿವೇಕಾನಂದರ ಪುಸ್ತಕಗಳನ್ನು ಹೆಚ್ಚಾಗಿ ಓದುತ್ತಿದ್ದ.ಒಂದು ವೇಳೆ ನನ್ನ ಮಗ ಸಮಾಜದಲ್ಲಿ ಅನ್ಯಾಯ ಮಾಡಿದ್ದಾನೆ ಅಂದ್ರೆ ಅವನು ಮಗನೇ ಅಲ್ಲ. ಆತ ತಪ್ಪು ಮಾಡಿದ್ದರೆ ಗಲ್ಲಿಗೇರಿಸಲಿ ಎಂದು ಬೇಸರ ವ್ಯಕ್ತಪಡಿಸಿದರು.

"ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರು ಪಾಸ್‌ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿರುವ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೇ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ

ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ದೇಶದ ಹೃದಯದಂತಿರುವ ಸಂಸತ್‌ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಕೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರು ಯಾರಾದರೂ ಭಾಗಿಯಾಗಿದ್ದಾರೆಯೇ? ಎಲ್ಲಾ ಮಾಹಿತಿಗಳು ತನಿಖೆಯಿಂದಲೇ ಗೊತ್ತಾಗಬೇಕಿದೆ.

Leave a Comment