ಜೀವಾವಧಿ ಶಿಕ್ಷೆಗೆ ಒಳಗಾದ ಗ್ಯಾಂಗ್‌ಸ್ಟರ್ ಅತೀಕ್ ಅಹಮ್ಮದ್ ಪುತ್ರನ ಎನ್‌ಕೌಂಟರ್.

Coastal Bulletin
ಜೀವಾವಧಿ ಶಿಕ್ಷೆಗೆ ಒಳಗಾದ ಗ್ಯಾಂಗ್‌ಸ್ಟರ್ ಅತೀಕ್ ಅಹಮ್ಮದ್ ಪುತ್ರನ ಎನ್‌ಕೌಂಟರ್.

ಉ.ಪ್ರ: ಶಾಸಕ ರಾಜು ಪಾಲ್ ಹತ್ಯೆಯ ಪ್ರಮುಖ ಸಾಕ್ಷಿ, ಉಮೇಶ್‌ ಪಾಲ್‌ ಕೊಲೆ ಪ್ರಕರಣದ ಬಳಿಕ ಉತ್ತರ ಪ್ರದೇಶದ ಮಾಫಿಯಾ ಗ್ಯಾಂಗ್‌ನ್ನು ಮಣ್ಣಲ್ಲಿ ಹೂತುಹಾಕುತ್ತೇನೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಯುಪಿ ಪೊಲೀಸರು ಉಮೇಶ್ ಪಾಲ್ ಹತ್ಯೆ ಆರೋಪಿಗಳನ್ನ ಹುಡುಕಿ ಹುಡುಕಿ ಎನ್‌ಕೌಂಟ್ ಆರಂಭಿಸಿದ್ದರು. ಇತ್ತ ರಾಜು ಪಾಲ್ ಹತ್ಯೆ ಮಾಡಿದ ಅಪರಾಧಿ ಅತೀಕ್ ಅಹಮ್ಮದ್ ಪುತ್ರ ಅಸಾದ್ ಹಾಗೂ ಮತ್ತೊರ್ವ ಆರೋಪಿ ಮಕ್ಸೂಸದನ್ ಪುತ್ರ ಗುಲಾಂ ಇಬ್ಬರನ್ನು ಉತ್ತರ ಪ್ರದೇಶ ಸ್ಪೆಷಲ್ ಟಾಸ್ಕ್ ಫೋರ್ಸ್(STF) ಎನ್‌ಕೌಂಟರ್ ಮಾಡಿದೆ. ಅಸಾದ್ ಹಾಗೂ ಗುಲಾಂ ಇಬ್ಬರು ಮೋಸ್ಟ್ ವಾಂಟೆಡ್ ಕ್ರಿಮಿನಲ್ ಪಟ್ಟಿಯಲ್ಲಿ ಸೇರಿಕೊಂಡಿದ್ದರು. ಉಮೇಶ್ ಪಾಲ್ ಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಇವರಿಬ್ಬರಿಗ ತಲೆಗೆ ಉತ್ತರ ಪ್ರದೇಶ ಸರ್ಕಾರ 5 ಲಕ್ಷ ರೂಪಾಯಿ ಇನಾಮು ಘೋಷಿಸಿತ್ತು. ಇದೀಗ ಇಬ್ಬರನ್ನು STFಎನ್‌ಕೌಂಟರ್ ಮಾಡಿದೆ.

2006ರ ಉಮೇಶ್‌ ಪಾಲ್‌ ಅಪಹರಣ ಪ್ರಕರಣದಲ್ಲಿ ದರೋಡೆಕೋರ ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರ ಖಾಲಿದ್‌ ಅಜೀಂ ತಪ್ಪಿತಸ್ಥರೆಂದು ಇತ್ತೀಚೆಗೆ  ಪ್ರಯಾಗ್‌ರಾಜ್‌ ನ್ಯಾಯಾಲಯ ತೀರ್ಪು ನೀಡಿತ್ತು, ಅತೀಕ್ ಅಹ್ಮದ್ ಗೆ ಜೀವಾವಧಿ ಶಿಕ್ಷೆ ನೀಡಿತ್ತು.

Leave a Comment