ಗೋವಾ; ಗೋವ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಸೇರಿ 11 ಕಾಂಗ್ರೆಸ್ ಶಾಸಕರ ಪೈಕಿ 8 ಮಂದಿ ಬುಧವಾರ ಬಿಜೆಪಿಗೆ ಸೇರಿದ್ದಾರೆ.
ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯ ಚುನಾವಣೆಯಲ್ಲಿ ಪಕ್ಷದ ಪ್ರಚಾರದ ನೇತೃತ್ವ ವಹಿಸಿದ್ದ ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತು ಲೋಪಿ ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಬಿಜೆಪಿ ಸೇರಿದ್ದಾರೆ.
ಲೋಬೋ ಅವರು ಬುಧವಾರ ಬೆಳಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಸಿ ಕಾಂಗ್ರೆಸ್ ಶಾಸಕಾಂಗ
ಪಕ್ಷವನ್ನು ಬಿಜೆಪಿಗೆ ವಿಲೀನಗೊಳಿಸಲು ನಿರ್ಧರಿಸಿದ್ದಾರೆ. ನಂತರ ಶಾಸಕರು ವಿಲೀನದ ಪತ್ರವನ್ನು ಕಾರ್ಯದರ್ಶಿ ಅವರಿಗೆ ಸಲ್ಲಿಸಿದರು.
ಈ ಬದಲಾವಣೆಯು ಕಾಂಗ್ರೆಸ್‌ಗೆ ಭಾರೀ ಹಿನ್ನೆಡೆಯಾಗಿದ್ದು, ಈಗ ಬರೀ 3 ಶಾಸಕರು ಮಾತ್ರ ಇದ್ದಾರೆ. ಮತ್ತೊಂದೆಡೆ ಬಿಜೆಪಿ ಶಾಸಕರ ಸಂಖ್ಯೆ 20 ರಿಂದ 28 ಕ್ಕೆ ಏರಿದೆ.
ನಾವು ಕಾಂಗ್ರೆಸ್ ಛೋಡೋ ಮತ್ತು ಬಿಜೆಪಿ ಜೋಡೋ ಅಭಿಯಾನವನ್ನು ಪ್ರಾರಂಭಿಸಿದ್ದೇವೆ ಎಂದು ಕ್ಯಾಲಂಗುಟ್ ಶಾಸಕ ಮತ್ತು ಲೋಪಿ ಮೈಕೆಲ್ ಲೋಬೋ ಹೇಳಿದರು.














