ನವ ದೆಹಲಿ: ಕೇಂದ್ರ ಸರ್ಕಾರ ಮಯನ್ಮಾರ್‌ನ ರೊಹಿಂಗ್ಯಾ ಮುಸ್ಲಿಂ ನಿರಾಶ್ರಿತರ ವಿಚಾರದಲ್ಲಿ ಯೂಟರ್ನ್ ಹೊಡೆದಿದೆ. ಇಷ್ಟು ವರ್ಷಗಳ ಕಾಲ ರೊಹಿಂಗ್ಯಾಗಳಿಗೆ ಆಶ್ರಯ ನೀಡಲು ಸಾಧ್ಯವಿಲ್ಲ ಎಂದಿದ್ದ ಕೇಂದ್ರ ಇದೀಗ ದೇಶದ ರಾಜಧಾನಿಯಲ್ಲೇ ಫ್ಲಾಟ್ ನೀಡಲು ನಿರ್ಧರಿಸಿದೆ.
ಕೇಂದ್ರ ಸರ್ಕಾರ ಮಯನ್ಮಾರ್ ದೇಶದ ರೊಹಿಂಗ್ಯಾ ನಿರಾಶ್ರಿತರಿಗೆ ದೆಹಲಿಯಲ್ಲಿ ಆಶ್ರಯ ನೀಡಲು ನಿರ್ಧರಿಸಿದ್ದೇವೆ. ಇದೊಂದು ಐತಿಹಾಸಿಕ ನಿರ್ಣಯ ಎಂದು ಸಚಿವ ಪುರಿ ಹೇಳಿದ್ದಾರೆ.
ಮಯನ್ಮಾರಿನಲ್ಲಿ ನೆಲೆಯಿಲ್ಲದೇ ನಿರಾಶ್ರಿತರಾಗಿ
ಅತಂತ್ರ ಪರಿಸ್ಥಿತಿ ಎದುರಿಸುತ್ತಿರುವ ರೋಹಿಂಗ್ಯಾ ಮುಸಲ್ಮಾನರಿಗೆ ಭಾರತದಲ್ಲಿ ಆಶ್ರಯ ನೀಡುವುದು ದೇಶದ ಭದ್ರತೆಗೆ ಕಂಟಕವಾಗಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂಕೋರ್ಟ್’ಗೆ ಅಫಿಡವಿಟ್ ಸಲ್ಲಿಸಿತ್ತು.















