ಹೈದರಾಬಾದ್ : ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಭಗೀರಥ್ ಸಾಯಿ ಕಾಲೇಜು ವಿದ್ಯಾರ್ಥಿ ಶ್ರೀರಾಂ ಎಂಬವರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ವೈರಲ್ ಆಗಿದೆ.
ಈ ಸಂಬಂಧ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಗೀರಥ ಸಾಯಿ ಸ್ನೇಹಿತನ ತಂಗಿ ಶ್ರೀರಾಂ ಅನುಚಿತವಾಗಿ ವರ್ತಿಸಿದ್ದ ಇದಕ್ಕೆ ಹಲ್ಲೆ ನಡೆಸಲಾಗಿದೆ ಎಂಬ ಸುದ್ದಿ ಕೂಡ ಇದೆ.
ಮಗನ ಮೇಲೆ ಪೋಲಿಸರು ಪ್ರಕರಣ ದಾಖಲಿಸಿರುವುದನ್ನು
ಬಂಡಿ ಸಂಜಯ ಕುಮಾರ್ ಖಂಡಿಸಿದ್ದಾರೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಕುಮ್ಮಕ್ಕಿನಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಇದೀಗ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ನಾಯಕನ ಪುತ್ರನ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.















