ಚಂಡೀಗಢ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಪಂಜಾಬ್‌ನಲ್ಲಿ ನಡೆದಿದೆ.ಆಕಾಂಕ್ಷ ಮೃತ ಏರೋಸ್ಪೇಸ್ ಎಂಜಿನಿಯರ್.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಆಕಾಂಕ್ಷಾ ನಾಯರ್ ಪಂಜಾಬ್ ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದರು.
6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಆಕಾಂಕ್ಷಾ ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್ ಗೆ ತೆರಳಿದ್ದರು.
ಈ ಹಿನ್ನೆಲೆಯಲ್ಲಿ ಸರ್ಟಿಫಿಕೇಟ್ ತರಲೆಂದು ಹೋಗಿದ್ದರು. ಉದ್ಯೋಗಕ್ಕಾಗಿ
ಜಪಾನ್ ಗೆ ತೆರಳಲು ಆಕಾಂಕ್ಷಾ ಪ್ಲಾನ್ ಮಾಡಿದ್ದರು. ಇದಕ್ಕಾಗಿ ಸರ್ಟಿಫಿಕೇಟ್ ಗಾಗಿ ಪಂಜಾಬ್ ಪಗ್ವಾಡಾ ಕಾಲೇಜಿಗೆ ಹೋಗಿ ಸರ್ಟಿಫಿಕೇಟ್ ಪಡೆದಿದ್ದರು.
ಸರ್ಟಿಫಿಕೇಟ್ ಪಡೆದ ಬಳಿಕ ಮನೆಗೆ ಕರೆ ಮಾಡಿದ್ದ ಆಕಾಂಕ್ಷಾ ಆ ಬಳಿಕ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಗಳ ಸಾವಿನ ಬಗ್ಗೆ ಜಲಂಧರ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.














