ಪಂಜಾಬ್ : ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ಸಲ್ಲಿಸಿದ್ದಾರೆ. ಮಧ್ಯಾಹ್ನ 2 ಗಂಟೆಯ ನಂತರ ಚಂಡೀಗಢದ ಅವರ ಅಧಿಕೃತ ನಿವಾಸದಲ್ಲಿ ಅವರ ಆಪ್ತ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿ, ಪದೇ ಪದೇ ಅವಮಾನಕ್ಕೆ ಗುರಿಯಾಗಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.
ಕಳೆದ ಹಲವು ವರ್ಷಗಳಿಂದ ಪಂಜಾಬ್ ಕಾಂಗ್ರೆಸ್ನಲ್ಲಿ ಬಿರುಕು ಮೂಡಿದೆ. ಬಂಡಾಯ
ಶಮನ ಮಾಡಲು ಹೈಕಮಾಂಡ್ ಎಷ್ಟೇ ಪ್ರಯತ್ನಿಸಿದರೂ, ಆಗುತ್ತಿಲ್ಲ. ಅಲ್ಲದೆ, ಅಂದಾಜು 40 ಕ್ಕೂ ಹೆಚ್ಚು ಶಾಸರು ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಗೆ ಪತ್ರ ಬರೆದಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.















