Coastal Bulletin

ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ ನಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಯತ್ನದ ನಂತರ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಹಾಸ್ಟೆಲ್ ನಲ್ಲಿ ವಾಸಿಸುವ ವಿವಿಧ ಹುಡುಗಿಯರ ಎಂಎಂಎಸ್ ವೈರಲ್ ಆಗಿದೆ.

ಅದೇ ಹಾಸ್ಟೆಲ್‌ನಿಂದ ಹುಡುಗಿಯೊಬ್ಬಳು ವಿಡಿಯೋಗಳನ್ನು ರೆಕಾರ್ಡ್ ಮಾಡಿ ಅವಳ ಬಾಯ್‌ ಫ್ರೆಂಡ್‌ ಗೆ ಫಾರ್ವರ್ಡ್ ಮಾಡಲಾಗಿದ್ದು, ಈ ವಿಡಿಯೋ ವೈರಲ್ ಆಗಿದೆ. 

ವಿದ್ಯಾರ್ಥಿನಿಯೂ ಈ ವಿಡಿಯೋವನ್ನು ‌

ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾಳೆ ಎಂದು ಶಂಕಿಸಲಾಗಿದೆ. ಈ ಆರೋಪಿ ವಿದ್ಯಾರ್ಥಿನಿಯನ್ನು ಪೋಲಿಸರು ಬಂಧಿಸಿದ್ದಾರೆ.

4 ಹುಡುಗಿಯರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆಕ್ರೋಶ ಭುಗಿಲೆದ್ದ ನಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

Leave a Comment