ಭಾರತದಿಂದ ಪರಾರಿಯಾದ ಪಾತಕಿ ದಾವೂದ್ ಇಬ್ರಾಹಿಂ ವಿಷ ಪ್ರಾಶನ, ಮುನ್ನೆಚ್ಚರಿಕಾ ಕ್ರಮವಾಗಿ ಪಾಕಿಸ್ತಾನದಲ್ಲಿ ಇಂಟರ್ ನೆಟ್ ಸ್ಥಗಿತ.

Coastal Bulletin
ಭಾರತದಿಂದ ಪರಾರಿಯಾದ ಪಾತಕಿ ದಾವೂದ್ ಇಬ್ರಾಹಿಂ ವಿಷ ಪ್ರಾಶನ, ಮುನ್ನೆಚ್ಚರಿಕಾ ಕ್ರಮವಾಗಿ ಪಾಕಿಸ್ತಾನದಲ್ಲಿ ಇಂಟರ್ ನೆಟ್ ಸ್ಥಗಿತ.

ಇಸ್ಲಾಮಾಬಾದ್: ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷ ಸೇವಿಸಿದ್ದಾನೆ ಎಂಬ ವರದಿಗಳು ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಡಾನ್‌ ದಾವೂದ್‌ ಇಬ್ರಾಹಿಂ ಸತ್ತೇ ಹೋಗಿದ್ದಾನೆಂಬ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಬ್ಬಿದೆ. ಇದರ ಪರಿಣಾಮ ಪಾಕಿಸ್ತಾನದಲ್ಲಿ ಇಂಟರ್‌ನೆಟ್‌ನ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧವನ್ನೂ ಹೇರಲಾಗಿದೆ.

ದಾವೂದ್‌ ಹೊಟ್ಟೆಯೊಳಗೆ ವಿಷ ಕಂಡುಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆತ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ವರದಿಗಳು ಪ್ರಕಟವಾಗಿದೆ. ಇದಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಊಹಾಪೋಹಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಸರ್ಕಾರ ಕಾರ್ಯಗತವಾಗಿದೆ ಎಂದು ಹೇಳಲಾಗುತ್ತಿದೆ.

ಭಾರತದಿಂದ ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷ ಸೇವಿಸಿ ಸತ್ತು ಹೋಗಿದ್ದಾನೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ, ಆತ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಮೂಲಗಳು ಹೇಳಿವೆ. ಈ ವರದಿಗಳ ಸುತ್ತಲಿನ ವರದಿಗಳು ಪಾಕಿಸ್ತಾನದಲ್ಲಿ ವ್ಯಾಪಕ ಆತಂಕವನ್ನು ಹೆಚ್ಚಿಸಿವೆ. ಆನ್‌ಲೈನ್ ಚರ್ಚೆಗಳಿಗೆ ಕಾರಣವಾಗಿದೆ.

1993ರ ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಭಾನುವಾರ ಕರಾಚಿ ಆಸ್ಪತ್ರೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿರಬಹುದು ಎಂದು ಸೋಮವಾರದ

ವರದಿಗಳು ಹೇಳಿವೆ. ರಾತ್ರಿ 8 ರಿಂದ 9 ರ ವರೆಗೆ ಆತ ನಿಧನ ಹೊಂದಿರಬಹುದು ಎಂದು ಮೂಲಗಳು ಹೇಳಿಕೊಂಡಿದೆ. ಆದರೆ, ಈ ಕುರಿತು ಯಾವುದೇ ಅಧಿಕೃತ ದೃಢೀಕರಣವನ್ನು ನೀಡಲಾಗಿಲ್ಲ. ಭಾರತದಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿರುವ ದಾವೂದ್ ಮೂರು ದಶಕಗಳಿಂದ ದುಬೈ ಹಾಗೂ ಪಾಕಿಸ್ತಾನದಲ್ಲಿ ವಾಸವಾಗಿದ್ದಾನೆ.

ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಪಾಕಿಸ್ತಾನದಲ್ಲಿ ವರ್ಚುವಲ್‌ ರ‍್ಯಾಲಿಗೆ ಮುಂದಾಗಿದ್ದಾರೆ. ಈ ಸುಳಿವು ಪಡೆದ ನಂತರ ಪಾಕಿಸ್ತಾನದಲ್ಲಿ ಇಂಟರ್‌ನೆಟ್‌ ಅನ್ನು ತಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ರಾಷ್ಟ್ರವ್ಯಾಪಿ ಇಂಟರ್ನೆಟ್ ಬ್ಲ್ಯಾಕೌಟ್‌ನಿಂದಾಗಿ ಪಾಕಿಸ್ತಾನದ ಜನರ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಇದು ಸಾರ್ವಜನಿಕರಿಗೆ ಭಾರೀ ತೊಂದರೆಗಳನ್ನು ಉಂಟುಮಾಡಿದೆ ಎಂದು ಹೇಳಲಾಗುತ್ತಿದೆ. ಇಮ್ರಾನ್ ಖಾನ್‌ ರ್ಯಾಲಿಗೆ ಮೊದಲು ಇಂಟರ್‌ನೆಟ್‌ ವೇಗವನ್ನು ಕಡಿಮೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

Leave a Comment