ಕೆನಡಾ: ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಮುಖ್ಯಸ್ಥರನ್ನು ಉಚ್ಛಾಟಿಸಿದೆ. ಕೆನಡಾದ ಈ ರಾಜತಾಂತ್ರಿಕ ಕ್ರಮವು ಒಟ್ಟಾವಾ ಮತ್ತು ದೆಹಲಿ ನಡುವಿನ ಸಂಬಂಧವನ್ನು ಹದಗೆಡಿಸಿದೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ಹೌಸ್ ಆಫ್ ಕಾಮನ್ಸ್ ಅನ್ನು ಉದ್ದೇಶಿಸಿ ಮಾತನಾಡುತ್ತಾ, ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡದ "ಪ್ರಬಲ ಆರೋಪಗಳು" ಇವೆ ಎಂದು ಹೇಳಿದರು. ನಮ್ಮ ಸರ್ಕಾರವು ಈ ಆರೋಪಗಳ ಬಗ್ಗೆ ಸಕ್ರಿಯವಾಗಿ ತನಿಖೆ ನಡೆಸುತ್ತಿದೆ. ಜಸ್ಟಿನ್ ಟ್ರುಡೊ ಅವರು ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಭಾರತ ಸರ್ಕಾರದ ಸಹಕಾರವನ್ನು ಕೋರಿದ್ದರು.
ಕೆನಡಾದಲ್ಲಿ ನಿಗೂಢವಾಗಿ ಹತ್ಯೆಯಾದ ಖಲಿಸ್ತಾನಿ ಉಗ್ರ ಹರ್‌ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿರುವ ಕೆನಡಾ ಪ್ರಧಾನಿ ಜಸ್ಟೀನ್ ಟ್ರಡೋ ಹೇಳಿಕೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ.
ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂದು ಆರೋಪಿಸಿರುವ ಕೆನಡಾ ಸರ್ಕಾರ, ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತದ ಉನ್ನತ ರಾಜತಾಂತ್ರಿಕ ಅಧಿಕಾರಿಯನ್ನು ವಜಾಗೊಳಿಸಿತ್ತು. ಕೆನಡಾದ ಈ ನಿರ್ಧಾರಕ್ಕೆ ಭಾರತವೂ ಈಗ ಎದಿರೇಟು ನೀಡಿದ್ದು, ಭಾರತದಲ್ಲಿರುವ ಕೆನಡಾ ರಾಯಭಾರಿಗೆ ಐದು ದಿನದೊಳಗೆ ದೇಶ ಬಿಟ್ಟು ತೆರಳುವಂತೆ ಸೂಚಿಸಿದೆ. ಈ ಬೆಳವಣಿಗೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿದೆ.
ಕೆನಡಾದ ಕೆಟ್ಟ ನಿರ್ಧಾರಕ್ಕೆ ದಿಟ್ಟ ಉತ್ತರ ನೀಡಿರುವ ಭಾರತ ಕೆನಡಾ ಹಿರಿಯ ರಾಜತಾಂತ್ರಿಕ ಅಧಿಕಾರಿಯೊಬ್ಬರನ್ನು ಐದು ದಿನಗಳೊಳಗೆ ಭಾರತ ತೊರೆಯುವಂತೆ ಕೆನಡಾ ಹೈಕಮಿಷನರ್ ಕೆಮರೋನ್ ಮೇಕೆ ಅವರಿಗೆ ತಿಳಿಸಿದೆ.