ಕೆನಡಾ: ಕರ್ನಾಟಕದ ತುಮಕೂರು ಮೂಲದ ಚಂದ್ರ ಆರ್ಯ ಎಂಬವರು ಕೆನಡಾದಲ್ಲಿ ಸಂಸದರಾಗಿದ್ದು, ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
"ಮಾನ್ಯ ಸಭಾಪತಿ ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಶಿಲ್ಲೆಯ ದುವಾರು ಗ್ರಾಮದ ಚಂದ್ರ ಆರ್ಯರವರು ಕೆನಡದಲ್ಲಿ
ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು ಐದು ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ." ಎಂದು ಕನ್ನಡ ಭಾಷೆಯಲ್ಲಿ ಹೇಳಿರುವ ವಿಡಿಯೋ ಕನ್ನಡಿಗರು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಹೆಮ್ಮೆ ಪಡುತ್ತಿದ್ದಾರೆ.














