Coastal Bulletin

ನವದೆಹಲಿ : 1000 ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ಕೇಂದ್ರದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದೆ.

2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನ ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು

ಈ ತೀರ್ಪು ಪ್ರಕಟಿಸಿದೆ.

ನೋಟು ಅಮಾನ್ಯಗೊಳಿಸಿದ ಸಂದರ್ಭದಲ್ಲಿ ಆರ್ ಬಿಐ ಮತ್ತು ಕೇಂದ್ರ ಸರ್ಕಾರ ಚರ್ಚೆ ನಡೆಸಿದ್ದವು. ಅಂತಹ ಕ್ರಮವನ್ನು ತರಲು ಕಾರಣವಿತ್ತು ಎಂದು ಪೀಠ ಭಾವಿಸಿದೆ ಎಂದು ಹೇಳಿದೆ.

Leave a Comment