Coastal Bulletin

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರದಿಂದ ಮೂರು ದಿನಗಳ ಕಾಲ 3 ವಿದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಜರ್ಮನಿಯ ಚಾನ್ಸಲರ್‌ ಓಲಾಫ್‌ ಸ್ಕೋಲ್ಜ್ ಅವರ ಆಮಂತ್ರಣದ ಮೇರೆಗೆ ಮೋದಿ ಮೇ. 2 ರಂದು ಬರ್ಲಿನ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ 6 ನೇ ಭಾರತ-ಜರ್ಮನಿ ಅಂತರ್‌ ಸರ್ಕಾರಿ ಸಮಾಲೋಚನೆಯಲ್ಲಿ ಮೋದಿ ಸಹ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ಪ್ರವಾಸಕ್ಕೂ ಮುನ್ನ ಮಾತನಾಡಿರುವ ಪ್ರಧಾನಿ, "ಜಗತ್ತು ಹಲವು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ವಿದೇಶಿ ಪ್ರವಾಸವನ್ನು ಕೈಗೊಂಡಿದ್ದೇನೆ. ಶಾಂತಿ ಸಮೃದ್ದಿಗಾಗಿ ಭಾರತದ ಅನ್ವೇಷಣೆಯಲ್ಲಿ ಪ್ರಮುಖ ಪಾಲುದಾರರಾಗಿರುವ ಯುರೋಪಿನ ನಾಯಕರೊಂದೊಗಿನ ಸಹಕಾರ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆಗಳು ನಡೆಸಲಿದ್ದೇನೆ," ಎಂದು ತಿಳಿಸಿದ್ದಾರೆ.

ಅಲ್ಲದೇ ವಾಣಿಜ್ಯ ದುಂಡುಮೇಜಿನ ಸಭೆಯಲ್ಲಿ ಕೈಗಾರಿಕಾ ಸಹಕಾರದ ಮೂಲಕ ಕೋವಿಡ್‌ ನಂತರದ ಸಮಯದಲ್ಲಿ ಉಭಯ ದೇಶಗಳ ಆರ್ಥಿಕತೆಯ ಪುನಶ್ಚೇತನದ ಹಿನ್ನೆಲೆಯಲ್ಲಿ ಮಾತುಕತೆ

ನಡೆಸಲಿದ್ದಾರೆ.

ಮೇ. 3 ಹಾಗೂ 4 ರಂದು ಡೆನ್ಮಾರ್ಕ್ನ ಕೋಪನ್‌ಹೇಗನ್‌ಗೆ ಪ್ರಧಾನಿ ಭೇಟಿಕೊಡಲಿದ್ದು, ಡ್ಯಾನಿಶ್‌ ಪ್ರಧಾನಿ ಮಾಟ್‌ ಫ್ರೆಡ್ರಿಕ್‌ಸನ್‌ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಲ್ಲದೇ 2ನೇ ಭಾರತ-ನಾರ್ಡಿಕ್‌ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಡೆನ್ಮಾರ್ಕ್ನಲ್ಲಿ ಭಾರತೀಯ ಮೂಲದ ಉದ್ಯಮಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತಕ್ಕೆ ಮರಳುವಾಗ ಮಾರ್ಗ ಮಧ್ಯದಲ್ಲಿ ಮೋದಿ ಪ್ಯಾರಿಸ್‌ಗೆ ಭೇಟಿ ನೀಡಿ, ಮರು ಆಯ್ಕೆಯಾದ ಫ್ರಾನ್ಸಿನ ರಾಷ್ಟಾರಧ್ಯಕ್ಷ ಇಮ್ಯಾನುಯೆಲ್‌ ಮಾಕ್ರೋನ್‌ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ

Leave a Comment