ಕೊಚ್ಚಿ: ಛತ್ರಪತಿಶಿವಾಜಿ ಮಹಾರಾಜರಿಂದ ಸ್ಫೂರ್ತಿ ಪಡೆದ ಹೊಸ ನೌಕಾಧ್ವಜವನ್ನು ಪ್ರಧಾನಿನರೇಂದ್ರಮೋದಿ ಶುಕ್ರವಾರ ಅನಾವರಣಗೊಳಿಸಿದ್ದಾರೆ. ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹನ ಯುದ್ಧನೌಕೆ ಐಎನ್‌ಎಸ್ ವಿಕ್ರಾಂತ್ ಮತ್ತು ಹೊಸ ನೌಕಾಧ್ವಜವನ್ನು ಲೋಕಾರ್ಪಡೆಗೊಳಿಸಲಾಗಿದೆ.
ಕೇರಳದ ಕೊಚ್ಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ನೌಕಾಧ್ವಜವನ್ನು ಅನಾವರಣಗೊಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ಸಿಂಗ್, ರಾಜ್ಯಪಾಲ ಆರಿಫ್ಮೊಹಮ್ಮದ್ಖಾನ್, ಕೇರಳ ಸಿಎಂ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಐಎನ್‌ಎಸ್ ವಿಕ್ರಾಂತ್ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ, ಇಂದು ಭಾರತವು ಸ್ಥಳೀಯ ತಂತ್ರಜ್ಞಾನದೊಂದಿಗೆ ಅಂತಹ
ದೊಡ್ಡ ವಿಮಾನವಾಹಕ ನೌಕೆಗಳನ್ನು ನಿರ್ಮಿಸುವ ದೇಶಗಳಿಗೆ ಸೇರಿದೆ. ಇಂದು ಐಎನ್‌ಎಸ್ ವಿಕ್ರಾಂತ್ ಭಾರತವನ್ನು ಹೊಸ ವಿಶ್ವಾಸದಿಂದ ತುಂಬಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ಭಾರತೀಯ ನೌಕಾಪಡೆ, ಎಲ್ಲಾ ಎಂಜಿನಿಯರ್‌ಗಳು, ವಿಜ್ಞಾನಿಗಳು ಮತ್ತು ಕೊಚ್ಚಿನ್ ಶಿಪ್‌ಯಾರ್ಡ್‌ನ ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.














