ದೆಹಲಿ : ವಿರೋಧ ಪಕ್ಷವು 2022 ರ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಿದರೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರನ್ನು ಜುಲೈ ಚುನಾವಣೆಗೆ ತನ್ನ ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಮುರ್ಮು ಅವರು ಆದಿವಾಸಿ ಬುಡಕಟ್ಟು ಜನಾಂಗಕ್ಕೆ ಸೇರಿದ ಮಹಿಳೆಯಾಗಿದ್ದು ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.