Coastal Bulletin

ಲಖನೌ : ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (89) ವಿಧಿವಶರಾಗಿದ್ದಾರೆ. ಕಳೆದ 51 ದಿನಗಳಿಂದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಸ್‌ಜಿಪಿಜಿಐ)ಗೆ ದಾಖಲಾಗಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಲ್ಯಾಣ್ ಸಿಂಗ್ ಹಲವು ತಿಂಗಳುಗಳಿಂದ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು.ಹಾಗಾಗಿ, ಪಿಜಿಐ ಲಖನೌದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಸಿಂಗ್ ಅವರಿಗೆ ಲಖನೌನ ಆರ್​ಎಮ್​ಎಲ್ ಇನ್ಸ್‌ಟಿಟ್ಯೂಟ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ

ಅವರನ್ನು ಪಿಜಿಐಗೆ ವರ್ಗಾಯಿಸಲಾಯಿತು. ಆದರೆ, ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಕಲ್ಯಾಣ್ ಸಿಂಗ್ ನಿಧನಕ್ಕೆ ಪಿಎಂ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Comment