ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ವಿಭಜಕ ಮೇಲೆ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಟ್ರಕ್ ಹರಿದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ದೆಹಲಿಯ ಸೀಮಾಪುರಿಯಲ್ಲಿ ಈ ಘಟನೆ ನಡೆದಿದ್ದು, ಕರೀಂ , ಚೋಟೆ ಖಾನ್, ಶಾಅಲಂ ಮತ್ತು ರಾಹುಲ್
ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ.
ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಟ್ರಕ್ ನಿಲ್ಲಿಸದೆ ಪರಾರಿಯಾಗಿದ್ದಾನೆ.














