ನವದೆಹಲಿ: ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ. ಈ ಜಯಂತಿಗೆ ನೇತಾಜಿ ಬೋಸ್ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರ ಪ್ರತಿಮೆಯನ್ನು ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಷ್ಠಾಪಿಸಲಾಗುವುದು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ.
ಇಡೀ ರಾಷ್ಟ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಮಯದಲ್ಲಿ, ಗ್ರಾನೈಟ್‌ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ
ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಲು ನನಗೆ ಹೆಮ್ಮೆಯಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಭಾರತದ ಹುತಾತ್ಮರ ಸ್ಮರಣಾರ್ಥ ಅಮರ್ ಜವಾನ್ ಜ್ಯೋತಿ ಮೇಲಾವರಣದ ಅಡಿಯಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸಲಾಗುವುದು.














