ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರ ಮೇಲಿನ ನಿಷೇಧವನ್ನು ತೆರವುಗೊಳಿಸಿದ ಕೇಂದ್ರ ಸರಕಾರ.

Coastal Bulletin
ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರ ಮೇಲಿನ ನಿಷೇಧವನ್ನು ತೆರವುಗೊಳಿಸಿದ ಕೇಂದ್ರ ಸರಕಾರ.

ದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಒಡನಾಟ ಹೊಂದಬಾರದು ಎಂದು ಸರ್ಕಾರಿ ಉದ್ಯೋಗಿಗಳ ಮೇಲೆ ಹೇರಲಾಗಿದ್ದ ದಶಕಗಳ ಹಿಂದಿನ ನಿಷೇಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​​​ಡಿಎ (NDA) ಸರ್ಕಾರ ತೆರವುಗೊಳಿಸಿದೆ. ಸರ್ಕಾರದ ಈ ನಿರ್ಧಾರವನ್ನು ಆರ್​​ಎಸ್ಎಸ್ ಸ್ವಾಗತಿಸಿದ್ದು ಇದು ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂದು ಹೇಳಿದೆ.

ಆರ್​​ಎಸ್ಎಸ್ ಸದಸ್ಯ ನಾಥೂರಾಂ ಗೋಡ್ಸೆ, ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಂತರ ಅದರ ಚಟುವಟಿಕೆಗಳ ಮೇಲಿನ ಕಳವಳದಿಂದಾಗಿ ಆರ್​​ಎಸ್ಎಸ್ ಅನ್ನು 1948ರಲ್ಲಿ ಕಾನೂನುಬಾಹಿರ ಸಂಘಟನೆ ಎಂದು ಆಗಿನ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. 1948ರ ಫೆಬ್ರುವರಿಯಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಸರ್ದಾರ್ ಪಟೇಲ್ ಅವರು ಆರ್‌ಎಸ್‌ಎಸ್ ಅನ್ನು ನಿಷೇಧಿಸಿದ್ದರು. ಆದಾಗ್ಯೂ, 1966 ರಲ್ಲಿ ಮತ್ತೊಮ್ಮೆ ನಿಷೇಧಿಸಲಾಗಿತ್ತು. ಗೋಹತ್ಯೆ ವಿರುದ್ಧ 1966ರಲ್ಲಿ ಸಂಸತ್‌ನಲ್ಲಿ ಭಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಗಾಗಿ ಆರ್​​ಎಸ್ಎಸ್- ಜನಸಂಘ ಲಕ್ಷಾಂತರ ಜನರನ್ನು ಒಗ್ಗೂಡಿಸಿತ್ತು. ಆಗ ನಡೆದ ಗೋಲಿಬಾರ್‌ನಲ್ಲಿ ಅನೇಕರು ಮೃತಪಟ್ಟಿದ್ದರು. ಆಗ ಇಂದಿರಾ ಗಾಂಧಿ, 1966 ನವೆಂಬರ್ 30ರಂದು ಸರ್ಕಾರಿ ಸಿಬ್ಬಂದಿಗಳು ಆರ್​​ಎಸ್ಎಸ್ ಸೇರದಂತೆ ನಿರ್ಬಂಧಿಸಿದರು ಎಂದು ಬಿಜೆಪಿ ಐಟಿ ಘಟಕದ

ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ.

1992 ರಲ್ಲಿ, ಬಾಬರಿ ಮಸೀದಿ ಧ್ವಂಸದ ನಂತರ ಆರ್​​ಎಸ್ಎಸ್ ಅನ್ನು ನಿಷೇಧಿಸಲಾಯಿತು. ಈ ನಿರ್ಧಾರ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆದಿತ್ತು. ಆಗ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ವಿಎಚ್‌ಪಿ, ಬಜರಂಗದಳ, ಜಮಾತ್- ಇ- ಇಸ್ಲಾಮಿ ಹಿಂದಿ ಮತ್ತು ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾದ ಮೇಲೂ ನಿಷೇಧ ಹೇರಿದ್ದರು.

ಆರೆಸ್ಸೆಸ್‌ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ. 58 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ನರೇಂದ್ರ ಮೋದಿ ಸರ್ಕಾರ ಹಿಂಪಡೆದಿದೆ. ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಚಾರ ಪ್ರಭಾರಿ ಸುನೀಲ್ ಅಂಬೇಕರ್ ಮಾತನಾಡಿ, ಸಂಘಟನೆಯು ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್ ನಿರ್ಮಾಣ ಮತ್ತು ಸಮಾಜ ಸೇವೆಯಲ್ಲಿ ಸದಾ ತೊಡಗಿಸಿಕೊಂಡಿದೆ ಎಂದು ಹೇಳಿದ್ದಾರೆ.

Leave a Comment