ಆರ್‌ಎಸ್‌ಎಸ್‌ ನಿಯಮದಂತೆ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ -ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿಕೆ.

Coastal Bulletin
ಆರ್‌ಎಸ್‌ಎಸ್‌ ನಿಯಮದಂತೆ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ -ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿಕೆ.

ಆರ್‌ಎಸ್‌ಎಸ್‌ ನಿಯಮದಂತೆ ಪ್ರಧಾನಿ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವುದಿಲ್ಲ. ಅವರೇ ಪ್ರಧಾನಿಯಾಗಿ ದೇಶ ಮುನ್ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವರು ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಹೇಳಿಕೆ ನೀಡಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದ ಬಿಡುಗಡೆಯಾದ ಒಂದು ದಿನದ ನಂತರ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ

ತೀವ್ರ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ಅವರ ಪಕ್ಷದ ನಿಯಮದ ಪ್ರಕಾರ 75 ವರ್ಷ ತುಂಬಿದವರು ನಿವೃತ್ತಿಯಾಗಬೇಕು ಎಂದಿದ್ದರು. 2014 ರಲ್ಲಿ ಪ್ರಧಾನಿ ಮೋದಿ ನಿಯಮ ಮಾಡಿದರು. ಹೀಗಾಗಿ ಮೋದಿ ಪ್ರಧಾನಿಯಾಗಿ ಮುಂದುವರೆಯಲು ಸಾಧ್ಯವಿಲ್ಲ. ಮೋದಿ ಬದಲು ಅಮಿತ್ ಶಾ ಪ್ರಧಾನಿಯಾಗುತ್ತಾರೆ. ಅಮಿತ್ ಶಾ ಪರವಾಗಿ ಮೋದಿ ಮತಯಾಚಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

Leave a Comment