ಸೇನಾ ವಾಹನ ಮೇಲೆ ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮ.

Coastal Bulletin
ಸೇನಾ ವಾಹನ ಮೇಲೆ ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮ.

ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯಲ್ಲಿ ಐವರು ಯೋಧರು ಹುತಾತ್ಮವಾಗಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಛ್​ನಲ್ಲಿ ನಡೆದಿದೆ. ಭಯೋತ್ಪಾದಕರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಐವರು ಯೋಧರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿ ನಡೆದ ಪ್ರದೇಶವನ್ನು ಸೇನೆಯ ಯೋಧರು ಸುತ್ತುವರಿದಿದ್ದಾರೆ, ಭಯೋತ್ಪಾದಕರನ್ನು ಮಣಿಸಲು ಹೆಚ್ಚುವರಿಯಾಗಿ ಯೋಧರನ್ನು ನಿಯೋಜಿಸಲಾಗಿದೆ

ಪೂಂಛ್​ನ ಬುಫ್ಲಿಯಾಜ್ ಬಳಿ ತೆರಳುತ್ತಿದ್ದ ವೇಳೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದಾರೆ. ಭಯೋತ್ಪಾದಕರ ಏಕಾಏಕಿ ದಾಳಿಗೆ ಯೋಧರು ತಕ್ಷಣವೇ ಪ್ರತ್ಯುತ್ತರ ನೀಡಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

ಸುದ್ದಿ ಮೂಲಗಳ ಪ್ರಕಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ (LET) ಸಹವರ್ತಿ ಸಂಘಟನೆ ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ (PAFF) ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ತಿಳಿದು ಬಂದಿದೆ.

Leave a Comment