ದೆಹಲಿ : 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.
ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಅವರನ್ನು ಸದನದಿಂದ ಅನರ್ಹಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ವಕೀಲ ವಿನೀತ್ ಜಿಂದಾಲ್ ಇಂದು ಲೋಕಸಭೆ ಸ್ಪೀಕರ್‌ಗೆ ದೂರು ಸಲ್ಲಿಸಿದ್ದಾರೆ. ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನಂತರ ವಿನೀತ್ ಜಿಂದಾಲ್ ಲೋಕಸಭಾಧ್ಯಕ್ಷರಿಗೆ ದೂರು ನೀಡಿದ್ದಾರೆ.
ದೂರುದಾರ ವಿನೀತ್ ಜಿಂದಾಲ್ ಅವರು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸುವಂತೆ ಕೋರಿದರು, ಮಾರ್ಚ್ 23ರಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮೋದಿ ಅವರ ಉಪನಾಮದ ಹೇಳಿಕೆಗಾಗಿ ದೋಷಿ ಎಂದು ತೀರ್ಪು ನೀಡಿದ್ದಾರೆ ಕೋರ್ಟ್ ಆದೇಶವನ್ನು ನೀಡಿದೆ, ಆ ಕಾರಣದಿಂದ ಅವರನ್ನು ಸದನದಿಂದ ತಕ್ಷಣವೇ ಅನರ್ಹಗೊಳಿಸಬೇಕು ಎಂದು ಪತ್ರದ ಮೂಲಕ ಲೋಕಸಭಾ ಅಧ್ಯಕ್ಷರಿಗೆ ಮನವಿ ಮಾಡಿಕೊಂಡಿದ್ದಾರೆ.
ಗುಜರಾತ್ ವಿಧಾನಸಭೆಯ ಶಾಸಕರೊಬ್ಬರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಪೂರ್ಣಗೊಳಿಸಿದ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ 2 ವರ್ಷಗಳ ಜೈಲು ಶಿಕ್ಷೆಯನ್ನು
ವಿಧಿಸಿತು. ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8 (3) ರ ಪ್ರಕಾರ, ಯಾವುದೇ ಅಪರಾಧಕ್ಕೆ ತಪ್ಪಿತಸ್ಥ ಮತ್ತು ಎರಡು ವರ್ಷಕ್ಕಿಂತ ಕಡಿಮೆಯಿಲ್ಲದ ಜೈಲು ಶಿಕ್ಷೆಗೆ ಗುರಿಯಾದ ಸಂಸದ/ಶಾಸಕರನ್ನು ಅಪರಾಧ ನಿರ್ಣಯದ ದಿನಾಂಕದಿಂದ ಅನರ್ಹಗೊಳಿಸಲಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾಯಿದೆಯ ಸೆಕ್ಷನ್ 8(3)ರ ಯಾವುದೇ ಅಪರಾಧಕ್ಕೆ ಶಿಕ್ಷೆಗೊಳಗಾದ ಯಾವುದೇ ಸದಸ್ಯ (MP/MLA) ಮತ್ತು ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಅಪರಾಧ ನಿರ್ಣಯದ ದಿನಾಂಕದಿಂದ, ಕಾಯಿದೆಯ ಮೇಲಿನ ವಿಭಾಗದ ವ್ಯಾಖ್ಯಾನದಿಂದ ಅನರ್ಹಗೊಳಿಸಲಾಗುತ್ತದೆ ಎಂದು ವ್ಯಾಖ್ಯಾನಿಸುತ್ತದೆ. ಇಂದಿನಿಂದಲೇ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗುವುದು ಎಂದು ದೂರಿನ ಪ್ರತಿಯನ್ನು ಹೇಳಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ಆದೇಶ ಹೊರಡಿಸುವಂತೆ ದೂರುದಾರರು ಸ್ಪೀಕರ್‌ಗೆ ಮನವಿ ಮಾಡಿದ್ದಾರೆ.
ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದ್ದು ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.














