Coastal Bulletin

ಗಾಂಧಿನಗರ : 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ.

ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. ಪ್ರಕರಣದಲ್ಲಿ ಪಿಎಂ ಮೋದಿ ಸೇರಿದಂತೆ ಹಲವರಿಗೆ ವಿಶೇಷ ತನಿಖಾ ತಂಡ ಈ ಹಿಂದೆ ಕ್ಲೀನ್ ಚಿಟ್ ನೀಡಿತ್ತು.

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಇಶಾನ್ ಜಫ್ರಿ ಅವರ ಪತ್ನಿ ಜಾಕಿಯಾ ಜಫ್ರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠವು ಗುಜರಾತ್

ಹತ್ಯಾಕಾಂಡದ ಹಿಂದಿನ ಪಿತೂರಿಯನ್ನು ತನಿಖೆ ಮಾಡಬೇಕೆಂದು 2021ರ ಡಿಸೆಂಬರ್ 9ರಂದು ಜಾಕಿಯಾ ಜಫ್ರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ತೀರ್ಪನ್ನು ಕಾಯ್ದಿರಿಸಿತ್ತು.

ಜಾಕಿಯಾ ಜಫ್ರಿ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಲವು ದಿನಗಳ ಕಾಲ ವಾದ ಮಂಡಿಸಿದ್ದರು. ಹಿರಿಯ ವಕೀಲ ಮುಕುಲ್ ರೋಹ್ಟಗಿ ಎಸ್​ಐಟಿ ಪರವಾಗಿ ವಾದ ಮಂಡಿಸಿದ್ದರು. ಸಾಲಿಟರ್ ಜನರಲ್ ಆಫ್ ಇಂಡಿಯಾ ತುಷಾರ್ ಮೆಹ್ತಾ ಗುಜರಾತ್ ಸರ್ಕಾರದ ಪರವಾಗಿ ವಾದ ಮಂಡಿಸಿ, ಈ ಅರ್ಜಿಯನ್ನು ವಿರೋಧಿಸಿದ್ದರು. ಇದೀಗ ನರೇಂದ್ರ ಮೋದಿ ಸೇರಿದಂತೆ ಇನ್ನೂ ಕೆಲವರಿಗೆ ಗುಜರಾತ್ ಗಲಭೆ ಪ್ರಕರಣದಲ್ಲಿ ನೀಡಲಾಗಿದ್ದ ಕ್ಲೀನ್ ಚಿಟ್ ಪ್ರಶ್ನಿಸಿದ ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.

Leave a Comment