ಕಾನ್ಪುರ: ಸಿಎಎ ಕಾಯ್ದೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಜನರ ಭಾವನೆಗಳನ್ನು ಕೆರಳಿಸುತ್ತಿರುವ ಜನ ನಾಯಕರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಯುಪಿ ಸಿಎಂ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ಸಿಎಎ ಕಾಯ್ದೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಜನರ ಭಾವನೆಗಳನ್ನು ಕೆರಳಿಸುತ್ತಿರುವ ಜನ ನಾಯಕರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಯುಪಿ ಸಿಎಂ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ ರಾಜ್ಯವೂ ಪ್ರತಿ ಮೂರು ಅಥವಾ ನಾಲ್ಕು ದಿನಗಳಿಗೊಮ್ಮೆ ಗಲಭೆಯನ್ನು ಎದುರಿಸಿದೆ. ನಾವು ಗಲಭೆಕೋರರನ್ನು ರಕ್ಷಿಸುವುದಿಲ್ಲ. ಬದಲಾಗಿ ಅವರ
ಎದೆಯ ಮೇಲೆ ಬುಲ್ಡೋಜರ್‌ನ್ನು ಓಡಿಸುತ್ತೇವೆ ಎಂದು ಯೋಗಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕಾನ್ಪುರದಲ್ಲಿ ಬೂತ್ ಮಟ್ಟದ ನಾಯಕರ ಜೊತೆ ನಡೆಸಿದ ಸಭೆಯಲ್ಲಿ ಮಾತನಾಡಿದ ಯೋಗಿ, ವ್ಯಕ್ತಿಯೊಬ್ಬ ಮತ್ತೊಮ್ಮೆ ಸಿಎಎ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದರು. ಅಸಾದುದ್ದೀನ್ ಓವೈಸಿ ಇತ್ತೀಚೆಗೆ ಸಿಎಎಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು.














