ಒಂದನೇ ತರಗತಿ ಪ್ರವೇಶಾತಿಗೆ 6 ವರ್ಷ ಕಡ್ಡಾಯ- ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ.

Coastal Bulletin
ಒಂದನೇ ತರಗತಿ ಪ್ರವೇಶಾತಿಗೆ 6 ವರ್ಷ ಕಡ್ಡಾಯ- ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ.

ನವದೆಹಲಿ: ಒಂದನೇ ತರಗತಿ ಪ್ರವೇಶಾತಿಗೆ (admission) ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ನಿರ್ದೇಶನ ನೀಡಿದೆ. 2024-25ರ ಸಾಲಿನ ಪ್ರವೇಶಕ್ಕೆ ಕನಿಷ್ಠ ಆರು ವರ್ಷ ವಯಸ್ಸಿನವರಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೂ ಸೂಚನೆ ನೀಡಿದೆ. ಈ ಕುರಿತಾಗಿ ಪತ್ರ ಬರೆಯಲಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು (RTE) ಕಾಯ್ದೆಯ 2009 ರ ನಿಬಂಧನೆಗಳ ಪ್ರಕಾರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು (RTE) ಕಾಯಿದೆ, 2009 ರಲ್ಲಿ ಒಳಗೊಂಡಿರುವ ನಿಬಂಧನೆಗಳ ಪ್ರಕಾರ

ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿದ್ದು, ಪ್ರವೇಶಾತಿಗೂ ಮುನ್ನ ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿನಂತಿಸಲಾಗಿದೆ.

Leave a Comment