Coastal Bulletin

ಉತ್ತರ ಪ್ರದೇಶ : ಇಂದು ಯೋಗಿ ಆದಿತ್ಯನಾಥ ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಉತ್ತರಪ್ರದೇಶದಲ್ಲಿ ೫ ಪೂರ್ಣಾವಧಿಗೆ ಸಿಎಂ ಹುದ್ದೆಯನ್ನು ನಿರ್ವಹಿಸಿ ಮತ್ತೆ ಅಧಿಕಾರಕ್ಕೇರುತ್ತಿರುವ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆಯು ಇವರಿಗೆ ಸಿಗಲಿದೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ೪೦೩ ಸ್ಥಾನಗಳ ಪೈಕಿ ಬಿಜೆಪಿಯು 273 ಸ್ಥಾನಗಳನ್ನು ಪಡೆದು ಗೆಲುವು ಸಾಧಿಸಿದೆ.

ಈ

ಕಾರ್ಯಕ್ರಮವು ನಾಲ್ಕು ಗಂಟೆಗೆ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿದೆ.  ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಸಾವಿರಾರು ಗಣ್ಯರು ಭಾಗಿಯಾಗಲಿದ್ದಾರೆ. ಕರ್ನಾಟಕದಿಂದ ಮುಖ್ಯಮಂತ್ರಿ ಬೊಮ್ಮಾಯಿ ಭಾಗಿಯಾಗಲಿದ್ದಾರೆ.

Leave a Comment