ಉತ್ತರ ಪ್ರದೇಶ : ರಾಜ್ಯದಾದ್ಯಂತದ ಧಾರ್ಮಿಕ ಸ್ಥಳಗಳಿಂದ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗುವುದು ಎಂದು ಉತ್ತರ ಪ್ರದೇಶ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಶಬ್ದ ಮಿತಿಯ ಮಾನದಂಡಗಳನ್ನು ಉಲ್ಲಂಘಿಸುವ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗುವುದು ತಿಳಿಸಿದ್ದಾರೆ. ಅಕ್ರಮ ಧ್ವನಿವರ್ಧಕಗಳು ಇರುವ ಎಲ್ಲಾ ಸ್ಥಳಗಳ ಪಟ್ಟಿಯನ್ನು ತಯಾರಿಸಿ, ಏಪ್ರಿಲ್ 30 ರೊಳಗೆ ಆ ಪಟ್ಟಿಯನ್ನು ಗೃಹ ಇಲಾಖೆಗೆ ಕಳುಹಿಸಲು ಪೊಲೀಸ್ ಠಾಣೆಗಳಿಗೆ ಸೂಚಿಸಲಾಗಿದೆ.
ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿದ ನಂತರ ಎಲ್ಲಾ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗುವುದು. ಅನುಮತಿಯೊಂದಿಗೆ ಧಾರ್ಮಿಕ ಸ್ಥಳಗಳಲ್ಲಿ
ಧ್ವನಿವರ್ಧಕಗಳನ್ನು ಬಳಸಬಹುದು ಆದರೆ ಶಬ್ದವು ಆವರಣದಿಂದ ಹೊರಬರಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ ಐದು ದಿನಗಳ ನಂತರ ಈ ಆದೇಶ ಬಂದಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಪ್ರಯಾಗ್ರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಸೂಚಿಸಿದ್ದರು.














