ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿಗಳನ್ನು ಶೀಘ್ರದಲ್ಲಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಮಂಗಳವಾರ ಸಿಜೆಐ ಪೀಠದ ಮುಂದೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ದಯವಿಟ್ಟು ಎರಡು ದಿನ ಕಾಯಿರಿ. ನಾನು ಪಟ್ಟಿ ಮಾಡುತ್ತೇನೆ ಎಂದು ಮೀನಾಕ್ಷಿ ಅರೋರಾ ಅವರಿಗೆ ತಿಳಿಸಿದ್ದಾರೆ. ಅವರು ವಿದ್ಯಾರ್ಥಿಗಳ ಪರವಾಗಿ ಪ್ರಕರಣದ ಆರಂಭಿಕ ವಿಚಾರಣೆಗೆ ಮೌಖಿಕವಾಗಿ ಪ್ರಸ್ತಾಪಿಸಿದರು.














