ಮೋದಿ ವಾಸ್ತವ್ಯ ಹೂಡಿದ ಹೋಟೆಲ್ ಬಿಲ್ 80 ಲಕ್ಷ ಬಾಕಿ; ಕಾನೂನು ಹೋರಾಟದ ಎಚ್ಚರಿಕೆ

Coastal Bulletin
ಮೋದಿ ವಾಸ್ತವ್ಯ ಹೂಡಿದ ಹೋಟೆಲ್ ಬಿಲ್ 80 ಲಕ್ಷ ಬಾಕಿ; ಕಾನೂನು ಹೋರಾಟದ ಎಚ್ಚರಿಕೆ

ಮೈಸೂರು: 2023ರ ಏಪ್ರಿಲ್‌ನಲ್ಲಿ ಮೈಸೂರಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಹೋಟೆಲ್‌ ಒಂದರಲ್ಲಿ ತಂಗಿದ್ದರು. ಈ ಹೋಟೆಲ್‌ನ ಬಿಲ್ ಬರೋಬ್ಬರಿ 80.6 ಲಕ್ಷ ರೂಪಾಯಿಯಾಗಿತ್ತು. ಈ ಬಿಲ್‌ ಇನ್ನು ಕಟ್ಟಿಲ್ಲ. ಹೀಗಾಗಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಜೂನ್ 1ರ ಒಳಗೆ 80 ಲಕ್ಷ ಬಿಲ್ ಕಟ್ಟದಿದ್ದರೆ ಕಾನೂನಾತ್ಮಕ ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ಮೆ.21 ರಂದು ಅರಣ್ಯ ಇಲಾಖೆ ಅಧಿಕಾರಿಗೆ ಹೋಟೆಲ್ ವ್ಯವಸ್ಥಾಪಕರು ಪತ್ರ ಬರೆದಿರುವ ಅವರು, 18% ಬಡ್ಡಿ ಸಮೇತ 80 ಲಕ್ಷ ಪಾವತಿಸಿ ಎಂದು ತಿಳಿಸಿದ್ದಾರೆ. ಅಲ್ಲದೇ ಜೂನ್ 1ರ ಒಳಗೆ ಬಿಲ್ ಕಟ್ಟದಿದ್ದರೆ ಕಾನೂನಾತ್ಮಕ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ 50ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಮೈಸೂರಿನ ಪಂಚತಾರ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಕಾರ್ಯಕ್ರಮದ ಒಟ್ಟು ವೆಚ್ಚ

6 ಕೋಟಿ ರೂ. ಆಗಿತ್ತು. ಆದರೆ ಇದುವರೆಗೆ 3 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಆಗಿದೆ.

ರಾಜ್ಯ ಅರಣ್ಯ ಇಲಾಖೆಗೆ ಕೇಂದ್ರ ಅರಣ್ಯ ಇಲಾಖೆಯಿಂದ ಬಾಕಿ ಹಣ ಬರಬೇಕಿದೆ. ಹಣ ತುರ್ತಾಗಿ ಬಿಡುಗಡೆ ಮಾಡಿ ಎಂದು ರಾಜ್ಯ ಅರಣ್ಯ ಇಲಾಖೆಯಿಂದ ಕೇಂದ್ರ ಅರಣ್ಯ ಇಲಾಖೆಗೆ ಪತ್ರ ರವಾನೆಯಾಗಿದೆ. ಆದರೆ ವರ್ಷ ಕಳೆದರೂ ಹೋಟೆಲ್ ಬಿಲ್ ಪಾವತಿಸಿಲ್ಲ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜು ಅವರನ್ನು ಸಂಪರ್ಕಿಸಿದಾಗ, ರಾಜ್ಯ ಸರ್ಕಾರವು ಹಣ ಪಾವತಿಸಲು ನಿರಾಕರಿಸಿದೆ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ ಎಂದು ವಾದಿಸಿದ್ದು, ಮೊತ್ತವನ್ನು ಪಾವತಿಸುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ತಿರಸ್ಕರಿಸಿದೆ ಎಂದು ತಿಳಿಸಿದ್ದಾರೆ.

Leave a Comment