ಭೋಪಾಲ್ : ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ವಿಷಯವಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಮತ್ತು ಆರು ಮಂದಿಗೆ ಒಂದು ವರ್ಷ ಕಠಿಣ ಶಿಕ್ಷೆ ವಿಧಿಸಿ, ಇಂಧೋರ್ ನ್ಯಾಯಾಲಯ ತೀರ್ಪು ನೀಡಿದೆ.
2011 ರಲ್ಲಿ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ದಿಗ್ವಿಜಯ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈಗ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಇದೀಗ ನ್ಯಾಯಾಲಯದ ತೀರ್ಪು ಪ್ರಶ್ನಿಸಿ, ಮೇಲ್ಮನವಿ ನೀಡುವುದಾಗಿ ದಿಗ್ವಿಜಯ ಸಿಂಗ್ ತಿಳಿಸಿದ್ದಾರೆ.














